ರಾಜಕೀಯ

ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಹಾಸ್ಯನಟರಂತೆ ವರ್ತಿಸುತ್ತಿದ್ದಾರೆ: ಹೆಚ್ ಡಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಹಾಸ್ಯನಟರಂತೆ...

ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಹಾಸ್ಯನಟರಂತೆ ವರ್ತಿಸುತ್ತಿದ್ದಾರೆ: ಹೆಚ್ ಡಿಕೆ
ಹೆಚ್.ಡಿ.ಕುಮಾರಸ್ವಾಮಿ
Published On :

ಕೊಪ್ಪಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಹಾಸ್ಯನಟರಂತೆ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ವಿರುದ್ಧ ಅವರಾಡುವ ಮಾತುಗಳನ್ನು ನಂಬುವಷ್ಟು ಈ ರಾಜ್ಯದ ಜನತೆ ಮೂರ್ಖರಲ್ಲ, ಅವರ ಮಾತುಗಳು ಏನೆಂದು ಜನತೆಗೆ ಅರ್ಥವಾಗುತ್ತದೆ. ಅವರ ನಟನೆಗೆ ತೆರೆ ಎಳೆಯುವ ಸಮಯ ಹತ್ತಿರ ಬಂದಿದೆ. ಜನರು ಮೇ 12ರಂದು ಕ್ಲೈಮಾಕ್ಸ್ ತೀರ್ಪು ನೀಡಲಿದ್ದಾರೆ ಎಂದರು.

ದೇವೇಗೌಡರ ವಿರುದ್ಧ ಆರೋಪಿಸುವ ಬದಲು ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ಮೋದಿಯವರು ರಾಜ್ಯದ ಜನತೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ತೋರಿಸಲಿ ಎಂದು ಒತ್ತಾಯಿಸಿದರು. ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸೋಲುವ ಭೀತಿ ಹೊಂದಿರುವುದರಿಂದ ಸಿನಿಮಾ ನಟರನ್ನು ಕರೆತಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಚಾರ ನಡೆಸುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.