ರಾಜಕೀಯ

ಪ್ರಧಾನಿ ಮೋದಿಗೆ ದಲಿತರ ಪರ ಕಾಳಜಿ ಇಲ್ಲ- ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರಮೋದಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ. ಅವರಿಗೆ ಕಾಳಜಿ ಇದ್ದಿದ್ದರೆ ಲೋಕಸಭೆಯಲ್ಲಿ ತಮ್ಮನ್ನು ವಿರೋಧ ಪಕ್ಷದ ನಾಯಕನಾಗಿ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಮುಖಂಡ ಎಂ. ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಪ್ರಧಾನಿ ಮೋದಿಗೆ ದಲಿತರ ಪರ ಕಾಳಜಿ ಇಲ್ಲ- ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Published On :

ಮಂಡ್ಯ : ಪ್ರಧಾನಿ ನರೇಂದ್ರಮೋದಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ. ಅವರಿಗೆ ಕಾಳಜಿ ಇದ್ದಿದ್ದರೆ ಲೋಕಸಭೆಯಲ್ಲಿ ತಮ್ಮನ್ನು ವಿರೋಧ ಪಕ್ಷದ ನಾಯಕನಾಗಿ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಮುಖಂಡ ಎಂ. ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಮಳವಳ್ಳಿಯಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷದ 48 ಸಂಸದರಿದ್ದರೂ, ನರೇಂದ್ರಮೋದಿ ತಮ್ಮನ್ನು ವಿರೋಧ ಪಕ್ಷದ ನಾಯಕನಾಗಿ ಮಾಡಲಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದರೆ ಕೇಂದ್ರ ಸಚಿವ ಸ್ಥಾನಮಾನ ದೊರಕುತಿತ್ತು  ಎಂದರು.

ವಿರೋಧ ಪಕ್ಷದ ನಾಯಕನಾಗಿ ಮಾಡಲು ಸಂವಿಧಾನ ತಿದ್ದುಪಡಿ ಮಾಡಬೇಕಿರಲಿಲ್ಲ, ಎಲ್ಲವೂ  ಪ್ರಧಾನಿ ಅವರ ಕೈಯಲ್ಲಿದ್ದರೂ ಉದ್ದೇಶಪೂರ್ವಕವಾಗಿಯೇ  ಆ ಹುದ್ದೆಯನ್ನು ನಿರಾಕರಿಸಲಾಯಿತು ಎಂದು ಹೇಳಿದರು.

 ಬಿಜೆಪಿ ಸಂಸದರು ಹಾಗೂ ನಾಯಕರು ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಿದ್ದಾರೆ.  ಸಂವಿಧಾನ ಬದಲಿಸುವ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ  ನಾಯಿ ಬಾಲಕ್ಕೆ ಸಮ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.