ರಾಜಕೀಯ

ಟ್ವಿಟರ್ ನಲ್ಲಿ ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್; ಬಿಜೆಪಿ ವಿರುದ್ಧ ಆಕ್ರೋಶ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲೆ ಒಂದೆಡೆ ರಾಜ್ಯದ ಜನರನ್ನು ಒಲಿಸಿಕೊಳ್ಳಲು ಪ್ರಧಾನಮಂತ್ರಿ ಮೋದಿಯವರು ಬಿಡುವಿಲ್ಲ ಪ್ರಚಾರಗಳನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಮೋದಿ...

ಟ್ವಿಟರ್ ನಲ್ಲಿ ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್; ಬಿಜೆಪಿ ವಿರುದ್ಧ ಆಕ್ರೋಶ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Published On :
ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲೆ ಒಂದೆಡೆ ರಾಜ್ಯದ ಜನರನ್ನು ಒಲಿಸಿಕೊಳ್ಳಲು ಪ್ರಧಾನಮಂತ್ರಿ ಮೋದಿಯವರು ಬಿಡುವಿಲ್ಲ ಪ್ರಚಾರಗಳನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಟ್ವಿಟರ್ ನಲ್ಲಿ ಮೋದಿ ಸರ್ಕಾರದ ವಿರುದ್ಧ ವಿಡಿಯೋಗಳನ್ನು ಹಾಕಿ, ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದೆ. 
ನಿನ್ನೆಯಷ್ಟೇ 'ಕರ್ನಾಟಕದ ಮೋಸ್ಟ್ ವಾಂಟೆಡ್' ಶೀರ್ಷಿಕೆಯಡಿಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಕಾಂಗ್ರೆಸ್, ರೆಡ್ಡಿ ಗ್ಯಾಂಗ್'ಗೆ 8 ಟಿಕೆಟ್ ನೀಡಿರುವುದರ ಬಗ್ಗೆ 5 ನಿಮಿಷ ಮಾತನಾಡುವಿರಾ...? ಎಂದು ಪ್ರಶ್ನೆ ಮಾಡಿತ್ತು. 
ಇದರಂತೆ ಇಂದೂ ಕೂಡ ವಿಡಿಯೋ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದೆ. ವಿಡಿಯೋದಲ್ಲಿ ಬಿಜೆಪಿಯವರು ದಲಿತರ ವಿರುದ್ಧ ಉಗ್ರ ಬಲಪಂಥೀಯ ಸಿದ್ಧಾಂತಗಳನ್ನು ಅನುಸರಿಸುತ್ತಿದ್ದಾರೆಂದು ಆರೋಪಿಸಲಾಗಿದೆ.
ದಲಿತರು ಸಮಾಜದ ಕೆಳ ತುದಿಯಲ್ಲಿಯೇ ಇರಬೇಕೆಂಬಹುದು ಬಿಜೆಪಿ ಹಾಗೂ ಆರ್'ಎಸ್ಎಸ್ ಧೋರಣೆಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತುಮಕೂರಿನ ದಲಿತರ ಮನೆಯಲ್ಲಿಯೇ ಊಟ ಮಾಡಿದರೂ, ಹೋಟೆಲ್ ನಿಂದ ಆಹಾರ ತರಿಸಿ ಸೇವಿಸಿದ್ದು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರು ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿಡಿಯೋದಲ್ಲಿ ಬಳಸಿಕೊಂಡಿರುವ ಕಾಂಗ್ರೆಸ್, ಬಿಜೆಪಿಯನ್ನು ತೀವ್ರವಾಗಿ ಖಂಡಿಸಿದೆ. 
ಇದಲ್ಲದೆ, ಮಧ್ಯಪ್ರದೇಶದ ದಾರ್ ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಸಂದರ್ಭದಲ್ಲಿ ಅಭ್ಯರ್ಥಿಗಳ ಎದೆ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂದು ಬರೆದಿದ್ದ ಪ್ರಕರಣ, ಜೊತೆಗೆ ದೇಶದಾದ್ಯಂತ ದಲಿತರ ಮೇಲೆ ನಡೆದಿರುವ ದೌರ್ಜನ್ಯವನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಬಿಜೆಪಿ ದಲಿತ ವಿರೋಧಿಯಾಗಿದ್ದು, ಮಿ.ಮೋದಿ ಆಡಳಿತದಲ್ಲಿ ದಲಿತರ ಮೇಲಿನ ಕ್ರೌರ್ಯ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.