ಹಿಂಸೆಗೆ ತಿರುಗಿದ ವೈರತ್ವ: ನಾಗನಹಳ್ಳಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ!

Published On :
ಮೈಸೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ದ್ವೇಷ ಹಿಂಸಾಚಾರಕ್ಕೆ ತಿರುಗಿದ್ದು,ಶನಿವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ನಾಗನಹಳ್ಳಿ ಹೊರವಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
ನಾಗನಹಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ಸಂದರ್ಭದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ ಉಂಟಾಗಿತ್ತು.
ಈ ವೇಳೆ ಜಿ.ಟಿ ದೇವಗೌಡ ಬೆಂಬಲಿಗರು ದರ್ಶನ್ ಪ್ರಚಾರಕ್ಕೆ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆ ನಡೆಸಿದ್ದರು.
ನಾಗನಹಳ್ಳಿ ಗ್ರಾಮ ಪಂಚಾಯಿತ್ ಸದಸ್ಯ ಲೋಹಿತ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಯದೇವ, ನಾಗನಹಳ್ಳಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾಶಂತಕ್ ಮತ್ತು ಅರ್ಜುನ್ ಎಂಬುವರು ಗಾಯಗೊಂಡಿದ್ದು,ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನ ನಾಗನಹಳ್ಳಿಯಲ್ಲಿ ನಿನ್ನೆ ದರ್ಶನ್ ಪ್ರಚಾರ ನಡೆಸಿ ಹೋದ ನಂತರ ಗಲಾಟೆ ಮಾಡಿಕೊಂಡಿರುವ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಮಾರಾಮಾರಿ ನಡೆಸಿದ್ದಾರೆ.
ನಾವು ಪ್ರಚಾರದಲ್ಲಿ ತೊಡಗಿದ್ದ ವೇಳೆ ಬೈಕ್ ನಲ್ಲಿ ಬಂದ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದರು, ಅವರ ಕೈಯಲ್ಲಿ ಲಾಂಗು ಮಚ್ಚುಗಳಿದ್ದವು ಎಂದ ಗಾಯಾಳು ತಿಳಿಸಿದ್ದಾನೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressJDSClashಘರ್ಷಣೆಕರ್ನಾಟಕ ವಿಧಾನ ಸಭೆ ಚುನಾವಣೆNaganahalliKarnataka Assembly Elcectiionನಾಗನಹಳ್ಳಿಕಾಂಗ್ರೆಸ್- ಜೆಡಿಎಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


