ರಾಜಕೀಯ

ಶ್ರೀರಾಮುಲು ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ ಚುನಾವಣಾ ಆಯೋಗ ತಡೆ

ಮೊಳಕಾಲ್ಮುರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಚುನಾವಣಾ ಪ್ರಚಾರಕ್ಕಾಗಿ ನಾಯಕನಹಟ್ಟಿಗೆ ಬಂದಿದ್ದ ನಟ ಕಿಚ್ಚ ಸುದೀಪ್ ಪ್ರಚಾರ ಮಾಡದೇ ವಾಪಸ್ ಹೋಗಿದ್ದಾರೆ...

ಶ್ರೀರಾಮುಲು ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ ಚುನಾವಣಾ ಆಯೋಗ ತಡೆ
ಸುದೀಪ್, ಶ್ರೀರಾಮುಲು
Published On :
ಚಿತ್ರದುರ್ಗ: ಮೊಳಕಾಲ್ಮುರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಚುನಾವಣಾ ಪ್ರಚಾರಕ್ಕಾಗಿ ನಾಯಕನಹಟ್ಟಿಗೆ ಬಂದಿದ್ದ ನಟ ಕಿಚ್ಚ ಸುದೀಪ್ ಪ್ರಚಾರ ಮಾಡದೇ ವಾಪಸ್ ಹೋಗಿದ್ದಾರೆ. 
ಪ್ರಚಾರಕ್ಕಾಗಿ ಚುನಾವಣಾ ಆಯೋಗ ನೀಡಿದ್ದ ಕಾಲಾವಧಿ ಮುಗಿದ ಹಿನ್ನಲೆಯಲ್ಲಿ ಸುದೀಪ್ ವಾಪಸ್ ಹೋಗಿದ್ದಾರೆ. ಆಯೋಗ ಸುದೀಪ್ ಪ್ರಚಾರಕ್ಕೆ ಬೆಳಿಗ್ಗೆ 9 ರಿಂದ 12 ಗಂಟೆವರೆಗೂ ಸಮಯ ನಿಗದಿ ಮಾಡಿತ್ತು. ಆದರೆ ಸುದೀಪ್ ಮಧ್ಯಾಹ್ನ 1 ಗಂಟೆಗೆ ಬಂದರು. ಈ ವೇಳೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು. 
ಪ್ರಚಾರಕ್ಕೆ ತಡೆ ಹಿನ್ನೆಲೆ ಸುದೀಪ್ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಸುದೀಪ್ ವೇಗವಾಗಿ ಪಟ್ಟಣದಿಂದ ಹೊರಟು ಹೋದರು. 
ಚುನಾವಣಾ ಪ್ರಚಾರದ ಅವಧಿ ವಿಸ್ತರಣೆಗಾಗಿ ಬಿಜೆಪಿ ಆಯೋಗಕ್ಕೆ ಮನವಿ ಮಾಡಿತು. ಆದರೆ ಅದೇ ಅವಧಿಯಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಪ್ರಚಾರಕ್ಕೆ ಅನುಮತಿ ನೀಡಲಾಗಿತ್ತು. ಹೀಗಾಗಿ ಪಟ್ಟಣದಲ್ಲಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಬಹುದು ಎಂಬ ಎಚ್ಚರಿಕೆಯಿಂದ ಅವಧಿಯನ್ನು ವಿಸ್ತರಿಸಲು ಅಧಿಕಾರಿಗಳು ಸಮ್ಮತಿಸಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.