'ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ'; ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ಕಾಂಗ್ರೆಸ್ ಮತ್ತು ಬಿಜೆಪಿ ಬಳಿಕ ಇದೀಗ ಜೆಡಿಎಸ್ ಕೂಡ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

Published On :
ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಬಳಿಕ ಇದೀಗ ಜೆಡಿಎಸ್ ಕೂಡ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಸೋಮವಾರ ಬೆಳಗ್ಗೆ ನಗರದಲ್ಲಿರುವ ಜೆಡಿಎಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು, 'ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ' ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡಲಾಗುವುದು. ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ತೆಗೆದುಕೊಂಡಿರುವ 53 ಸಾವಿರ ಕೋಟಿ ರೂ. ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಜೆಡಿಎಸ್ ಇಂದು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು ಇಂತಿವೆ.
65 ವರ್ಷದ ಹಿರಿಯ ನಾಗರಿಕರಿಗೆ 6 ಸಾವಿರ ಮಾಸಾಶನ, ವಕೀಲರಿಗೆ 5000 ಸ್ಟೈ ಫಂಡ್, ಎಸಿಬಿ ನಿರ್ಮೂಲನೆ, ಲೋಕಾಯುಕ್ತ ಬಲವರ್ಧನೆ, ಸರ್ಕಾರಿ ಅಧಿಕಾರಿಗಳ ಆಸ್ತಿ ವಿವರ ವೆಬ್ಸೈಟ್ನಲ್ಲಿ ಪ್ರಕಟ, ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಸೇರಿದಂತೆ ಹಲವು ಪ್ರಮುಖಾಂಶಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ.
ಅಂತೆಯೇ ಗ್ರಾಮೀಣ ಭಾಗಕ್ಕೆ 24 ಗಂಟೆಯೂ ಮೂರು ಫೇಸ್ ವಿದ್ಯುತ್ ಪೂರೆಕೆ, ಬಿಪಿಎಲ್ ಕುಟುಂಬಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ, ಕಾರ್ಮಿಕರಿಗೆ ಪ್ರೋತ್ಸಾಹ ಧನ ಸೇರಿದಂತೆ ಇತರೆ ಅಂಶಗಳನ್ನು ಪ್ರಣಾಳಿಕೆ ಹೊಂದಿದೆ ಎನ್ನಲಾಗಿದೆ.
ಇನ್ನು ಜೆಡಿಎಸ್ ನ ಪ್ರಣಾಳಿಕೆಯನ್ನು ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣ್ಯ ನೇತೃತ್ವದಲ್ಲಿ ಸಿದ್ಧಪಡಿಸಲಾಗಿದ್ದು, ಈಗಾಗಲೇ ಪಕ್ಷವು ಘೋಷಣೆ ಮಾಡಿರುವಂತೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರಾಜ್ಯದ ರೈತರ ಎಲ್ಲಾ ರೀತಿಯ ಸಾಲ ಮನ್ನಾ ತೀರ್ಮಾನವು ಪ್ರಣಾಳಿಕೆಯ ಪ್ರಮುಖ ಅಂಶವಾಗಿದೆ. ಅಂತೆಯೇ ಕುಮಾರಸ್ವಾಮಿ ಅವರು ವಿವಿಧ ಕ್ಷೇತ್ರಗಳ ಜನರೊಂದಿಗೆ ನಡೆಸಿರುವ ಸಂವಾದಗಳಲ್ಲಿ ಪಡೆದ ಮಾಹಿತಿಗಳನ್ನು ಸಹ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruJDSPoliticsರಾಜಕೀಯಜೆಡಿಎಸ್HD Kumaraswamyಎಚ್ ಡಿ ಕುಮಾರಸ್ವಾಮಿmanifestoಪ್ರಣಾಳಿಕೆKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


