ಮೈಸೂರು: ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಸಿಪಿಐ ಮೈತ್ರಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ...

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜೊತೆ ಕೈಜೋಡಿಸುವುದಾಗಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಹೇಳಿದೆ.
ಸಿಪಿಐಯ ಮೈಸೂರು ಜಿಲ್ಲಾ ಮಂಡಳಿ ಕಾರ್ಯದರ್ಶಿ ಹೆಚ್.ಆರ್.ಶೇಶಾದ್ರಿ ಮಾತನಾಡಿ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ ಸಿಪಿಎಂ ಅಭ್ಯರ್ಥಿ ಬಾಗೆಪಲ್ಲಿಯ ಶ್ರೀರಾಮ ರೆಡ್ಡಿ, ಮಾಜಿ ಶಾಸಕ ಮತ್ತು ರೈತ ಮುಖಂಡ ಮೇಲುಕೋಟೆಯಿಂದ ಸ್ಪರ್ಧಿಸುತ್ತಿರುವ ಸ್ವರಾಜ್ ಇಂಡಿಯಾದ ಸಿಎಸ್ ಪುಟ್ಟಣ್ಣಯ್ಯ ಅವರ ಮಗ ದರ್ಶನ್ ಪುಟ್ಟಣ್ಣಯ್ಯ, ಸಿಪಿಐಯ ಇಬ್ಬರು ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಮತ್ತು ಇತರ 220 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ್ನು ಬೆಂಬಲಿಸಲಿದೆ.
ಹೆಸರನ್ನು ಬಹಿರಂಗಪಡಿಸಲಿಚ್ಛಿಸದ ಶೇಷಾದ್ರಿ, ಕಾಂಗ್ರೆಸ್ ನ ಹಿರಿಯ ಮುಖಂಡರು ತಮ್ಮ ಬಳಿ ಬಂದು ಚುನಾವಣೆಯಲ್ಲಿ ಸಿಪಿಐನ ಬೆಂಬಲ ಕೋರಿದರು. ಆದರೆ ಸಿಪಿಐ ಸ್ವಯಂಪ್ರೇರಿತವಾಗಿ ಕಾಂಗ್ರೆಸ್ ನ್ನು ಈ ಚುನಾವಣೆಯಲ್ಲಿ ಬೆಂಬಲಿಸುತ್ತದೆ ಎಂದು ಹೇಳಿದರು.
ನಾವು ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಬೆಂಬಲಿಸುತ್ತೇವೆ. ನರೇಂದ್ರ ಮೋದಿಯವರು ತಂದಿರುವ ನೀತಿಯಿಂದಾಗಿ ಈ ದೇಶದ ಬಡ ಕಾರ್ಮಿಕರಿಗೆ ತೊಂದರೆಯಾಗಿದೆ ಅದರಲ್ಲೂ ಮುಖ್ಯವಾಗಿ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ. ಹೀಗಾಗಿ ನಾವು ಸಿದ್ದರಾಮಯ್ಯ ಸರ್ಕಾರವನ್ನು ಬೆಂಬಲಿಸಲು ತೀರ್ಮಾನಿಸಿದ್ದೇವೆ. ಕಳೆದ 5 ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ ದೇಶದ ರಾಜ್ಯದ ಜನತೆಗೆ ಒಳಿತನ್ನು ಮಾಡಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


