ರಾಜಕೀಯ

ರಾಮ ರಾಜ್ಯಕ್ಕಾಗಿ ಬಿಜೆಪಿಗೆ ಮತ ನೀಡಿ: ಯೋಗಿ ಆದಿತ್ಯನಾಥ್

ಬಿಜೆಪಿ ಮತ ನೀಡುವ ಮೂಲಕ ರಾಜ್ಯದಲ್ಲಿ ರಾಮ ರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ...

ರಾಮ ರಾಜ್ಯಕ್ಕಾಗಿ ಬಿಜೆಪಿಗೆ ಮತ ನೀಡಿ: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Published On :
ಭಾಲ್ಕಿ: ಬಿಜೆಪಿ ಮತ ನೀಡುವ ಮೂಲಕ ರಾಜ್ಯದಲ್ಲಿ ರಾಮ ರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಕರೆ ನೀಡಿದ್ದಾರೆ.
ಇಂದು ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತಮಾಡಿದ ಯೋಗಿ, ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕಿತ್ತು ಹಾಕಲು ಹಲವು ಕಾರಣಗಳಿವೆ. ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದ್ದು, ನೀವು ಈ ಬಾರಿ ಬಿಜೆಪಿಗೆ ಮತ ಹಾಕಿದರೆ ನಿಮ್ಮ ಹಣ ಮತ್ತೆ ವಾಪಸ್ ಬರಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಛತ್ರಪತಿ ಶಿವಾಜಿಯ ಪ್ರತಿಮೆ ಸ್ಥಾಪನೆ ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಯಾವುದೇ ವಿರೋಧ ಇಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.