ರಾಜಕೀಯ

ಪ್ರಧಾನಿ ಮೋದಿ ಒಳ್ಳೆಯ ಭಾಷಣಕಾರ, ಆದರೆ ಅದರಿಂದ ಹೊಟ್ಟೆ ತುಂಬಲ್ಲ: ಸೋನಿಯಾ ಗಾಂಧಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ಒಳ್ಳೆಯ ಭಾಷಣಕಾರ, ಆದರೆ ಅದರಿಂದ ಹೊಟ್ಟೆ ತುಂಬಲ್ಲ: ಸೋನಿಯಾ ಗಾಂಧಿ
ಸೋನಿಯಾಗಾಂಧಿ
Published On :

ಬಬಲೇಶ್ವರ: ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ಕರ್ನಾಟಕವನ್ನು ನಿರ್ಲಕ್ಷಿಸಿದ್ದು, ತಾರತಾಮ್ಯ ನೀತಿ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆರೋಪಿಸಿದ್ದು,  ಮೋದಿಯ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಘೋಷಣೆಯನ್ನು ಪ್ರಶ್ನಿಸಿದ್ದಾರೆ.

ವಿಜಯಪುರ ಜಿಲ್ಲೆ ಬಬಲೇಶ್ವರದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,ಕರ್ನಾಟಕ ಬರಗಾಲದಿಂದ ಬಳಲುತ್ತಿದ್ದು ರೈತರು ಸಂಕಷ್ಟಕ್ಕೀಡಾಗಿದ್ದರೂ ಮೋದಿ ಸ್ಪಂದಿಸಲಿಲ್ಲ ಇದು ರಾಜ್ಯದ ರೈತರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ್ದ ಅಪಮಾನ ಎಂದು ವಾಗ್ದಾಳಿ ನಡೆಸಿದರು.

ರೈತರ ಸಾಲ ಮನ್ನಾಕ್ಕಾಗಿ ಸಿದ್ದರಾಮಯ್ಯ ಹಲವು ಬಾರಿ ಪ್ರಧಾನಿ ಅವರ ಬಳಿ ನೆರವು ಕೋರಿದ್ದರೆ, ಪ್ರಧಾನಿ ಅದನ್ನು ತಿರಸ್ಕರಿಸುತ್ತಾರೆ. ಕೇಂದ್ರವನ್ನು ಅವಲಂಬಿಸಿದೆ ಸಿದ್ದರಾಮಯ್ಯ 22 ಲಕ್ಷ ರೈತರ ಸಾಲ ಮನ್ನಾ ಮಾಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟಿನ್ ಮತ್ತಿತರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು. 

ಯುಪಿಎ ಜಾರಿಗೊಳಿಸಿದ್ದ ನರೇಗಾ ಯೋಜನೆಯನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ವಿರೋಧಿಸಿದ್ದರು. ಮೋದಿ ಕಲಾವಿದರಂತೆ ಮಾತನಾಡುತ್ತಾರೆ. ಅವರ ಭಾಷಣದಿಂದ  ದೇಶವನ್ನು ಹಸಿವಿನಿಂದ ಮುಕ್ತಗೊಳಿಸಿದ್ದರೆ ಸಂತೋಷಗೊಳ್ಳುತ್ತಿದ್ದೆ. ಆದರೆ, ಅವರ ಭಾಷಣದಿಂದ ಹೊಟ್ಟೆ ತುಂಬುವುದಿಲ್ಲ, ಹಸಿವು ನೀಗಿಸುವ ಆಹಾರದ ಅಗತ್ಯವಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ  ಹಲವು ಜನಪರ  ಯೋಜನೆಗಳನ್ನು ಜಾರಿಗೊಳಿಸುವ ಮೂಲಕ  ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ.

ದೇಶದ ನೈಜ ಸಮಸ್ಯೆಗಳ ಬಗ್ಗೆ ಮೋದಿಗೆ ಕಾಳಜಿ ಇಲ್ಲ,ದಲಿತರು, ಮಹಿಳೆಯರು, ಮಕ್ಕಳಿಗಾಗಿ ಏನು ಮಾಡಿದ್ದಾರೆ ಭ್ರಷ್ಟಾಚಾರದಲ್ಲಿ ಮುಳುಗಿರುವ  ನಿಮ್ಮ ಸಚಿವರ ಬಗ್ಗೆ ನಿಮ್ಮ ನಿಲುವು ಏನು ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ ಸೋನಿಯಾಗಾಂಧಿ, ರಾಜ್ಯದ ಅಭಿವೃದ್ದಿಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.