ರಾಜಕೀಯ

ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲ: ಶಿವರಾಜ್ ಚೌವ್ಹಾಣ್

ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ರಾಹುಲ್ ಗಾಂಧಿಯನ್ನು ಯಾರು ಗಂಭೀರವಾಗಿ ಪರಿಗಣಿಸುವುದಿಲ್ಲ ...

ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲ: ಶಿವರಾಜ್ ಚೌವ್ಹಾಣ್
ಶಿವರಾಜ್ ಚೌವ್ಹಾಣ್
Published On :
ಹುಬ್ಬಳ್ಳಿ: ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ರಾಹುಲ್ ಗಾಂಧಿಯನ್ನು ಯಾರು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಬುಧವಾರ ವ್ಯಂಗ್ಯವಾಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಧ್ಯ ಪ್ರದೇಶ ಸಿಎಂ, ಕಾಂಗ್ರೆಸ್ ನಾಯಕತ್ವವನ್ನು ನೋಡಿದರೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗಲು ಸಿದ್ಧ ಎನ್ನುವುದು ನೋಡಿದರೆ ನಿಮಗೆ ತಮಾಷೆ ಅನಿಸುತ್ತದೆ ಎಂದರು.
ರಾಹುಲ್ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ. ಆದರೂ ಅವರು ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2019ರಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ ತಾವು ಪ್ರಧಾನಿಯಾಗಲು ಸಿದ್ಧ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.