ನಕಲಿ ಮತದಾರರ ಚೀಟಿ ಸೃಷ್ಟಿ ಕಾಂಗ್ರೆಸ್ ತತ್ವ: ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
ನಕಲಿ ಮತದಾರರ ಚೀಟಿ ಸೃಷ್ಟಿಸುವುದೇ ಕಾಂಗ್ರೆಸ್ ತತ್ವ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಬುಧವಾರ ಆರೋಪ ಮಾಡಿದ್ದಾರೆ...

Published On :
ಬೆಂಗಳೂರು; ನಕಲಿ ಮತದಾರರ ಚೀಟಿ ಸೃಷ್ಟಿಸುವುದೇ ಕಾಂಗ್ರೆಸ್ ತತ್ವ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಬುಧವಾರ ಆರೋಪ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಿಜವಾದ ಮತದಾರರು ತಮಗೆ ಮತ ಹಾಕದಿದ್ದರೆ, ನಕಲಿ ಮತದಾರರನ್ನು ಸೃಷ್ಟಿಸುವುದು ಕಾಂಗ್ರೆಸ್ ಪಕ್ಷದ ತತ್ವ. ಮಂಗಳವಾರ ರಾತ್ರಿ ದೊರಕಿರುವುದು ಬೃಹತ್ ಸಮುದ್ರದಲ್ಲಿನ ಚಿಟಿಕೆಯಷ್ಟು ಉಪ್ಪು ಮಾತ್ರ ಎಂದು ಹೇಳಿದ್ದಾರೆ.
ರಾಜರಾಜೇಶ್ವರಿನಗರ ಕ್ಷೇತ್ರ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಬೇಕು. ಸೈಬರ್ ಭದ್ರತಾ ದಳದಿಂದ ಕೂಡಲೇ ತೀವ್ರವಾದ ತನಿಖೆ ಆರಂಭಿಸಬೇಕು ಮತ್ತು ಫ್ಲಾಟ್ ಮಾಲೀಕೆ ಮಂಜುಳಾ ಅವರನ್ನು ಕೂಡಲೇ ಬಂಧನಕ್ಕೊಳಪಡಿಸಿ ಈ ಮೂರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Karnatakaಕರ್ನಾಟಕPrakash Javadekarಪ್ರಕಾಶ್ ಜವಡೇಕರ್voter idKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆವೋಟರ್ ಐಟಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


