ಇನ್ನು ಮುಂದೆ ಚುನಾವಣೆ ಪ್ರಚಾರ ಮಾಡಲ್ಲ: ಕಿಚ್ಚ ಸುದೀಪ್ ಟ್ವೀಟ್
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ರಾಜಕೀಯ ಪ್ರಚಾರದಲ್ಲಿ ತೊಡಗಿಕೊಂಡಿರುವ ನಟ ಸುದೀಪ್, ದಿಢೀರನೇ ತಮ್ಮ ನಿರ್ಧಾರ ಬದಲಾಯಿಸಿದ್ದಾರೆ...

Published On :
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ರಾಜಕೀಯ ಪ್ರಚಾರದಲ್ಲಿ ತೊಡಗಿಕೊಂಡಿರುವ ನಟ ಸುದೀಪ್, ದಿಢೀರನೇ ತಮ್ಮ ನಿರ್ಧಾರ ಬದಲಾಯಿಸಿದ್ದಾರೆ.
ಇನ್ನು ಮುಂದೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಮಂಗಳವಾರ ಅವರು ಟ್ವೀಟ್ ಮಾಡಿದ್ದಾರೆ. ಹೀಗಾಗಿ ಬುಧವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚುನಾವಣಾ ಪ್ರಚಾರಕ್ಕೆ ಸುದೀಪ್ ಹೋಗುತ್ತಿಲ್ಲ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಗೆಳೆಯ ರಾಜುಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚುನಾವಣಾ ಪ್ರಚಾರ ಮಾಡುವುದಾಗಿ ಸುದೀಪ್ ಕೆಲವು ದಿನಗಳ ಹಿಂದೆ ಘೋಷಿಸಿದ್ದರು. ಅಂದಿನಿಂದಲೇ ಅವರ ನಿರ್ಧಾರವನ್ನು ವಿರೋಧ ಪಕ್ಷಗಳೂ ಅವರ ಜನಾಂಗಕ್ಕೆ ಸೇರಿದವರು ಮತ್ತು ಅಭಿಮಾನಿಗಳು ಟೀಕಿಸುತ್ತಲೇ ಬಂದಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗೆಳೆಯರ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇನ್ನು ಮುಂದೆ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ. ಎಲ್ಲರಿಗೂ ನನ್ನ ಮೇಲೆ ಅಭಿಮಾನ, ಅವಶ್ಯಕತೆ ಇದೆ ಎಂಬುದು ನಿಜ. ಆದರೆ ನಾನು ಭಾಗವಹಿಸುವುದರಿಂದ ಚುನಾವಣಾ ಫಲಿತಾಂಶ ಬದಲಾಗುತ್ತದೆ ಎಂದೇನೂ ನಾನು ಭಾವಿಸುವುದಿಲ್ಲ. ಅಷ್ಟು ದೊಡ್ಡ ವ್ಯಕ್ತಿಯೂ ನಾನಲ್ಲ. ನಾನು ಕಲಾವಿದ. ನನಗೆ ನನ್ನ ಪಯಣದಲ್ಲಿ ಜೊತೆಗಿದ್ದ ಅಭಿಮಾನಿಗಳು ಮತ್ತು ಗೆಳೆಯರ ಅಭಿಪ್ರಾಯವೇ ಮುಖ್ಯ. ಇದು ನಾನು ತೆಗೆದುಕೊಳ್ಳುತ್ತಿರುವ ಕಠಿಣ ನಿರ್ಧಾರ. ಇದನ್ನು ಗೆಳೆಯರು ಮತ್ತು ಅಭಿಮಾನಿಗಳ ಪರವಾಗಿ ತೆಗೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ.
ಅಭಿಮಾನಿಗಳ ಮತ್ತು ಗೆಳೆಯರ ಒತ್ತಾಯಕ್ಕೆ ಮಣಿದು ಪ್ರಚಾರ ಮಾಡುವುದಿಲ್ಲ ಎಂದು ಟ್ವೀಟ್ ಮಾಡಿದ್ದ ಕಿಚ್ಚಾ ಸುದೀಪ್ ಸದ್ಯ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


