ರಂಗೇರಿದ ರಾಮನಗರ ಚುನಾವಣಾ ಕಣ: 4ನೇ ಬಾರಿ ಮುಂದುವರಿಯುವುದೇ ಎಚ್ ಡಿಕೆ ಪಯಣ?
ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ಸತತ ನಾಲ್ಕನೇ ಬಾರಿಗೆ ರಾಮನಗರ ವಿಧಾನ ಸಭೆ ಕ್ಷೇತ್ರದಿಂದ ಅದೃಷ್ಟ ಪರೀಕ್ಷಿಸಲು ಕಣಕ್ಕಿಳಿದಿದ್ದಾರೆ...

Published On :
ರಾಮನಗರ: ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ಸತತ ನಾಲ್ಕನೇ ಬಾರಿಗೆ ರಾಮನಗರ ವಿಧಾನ ಸಭೆ ಕ್ಷೇತ್ರದಿಂದ ಅದೃಷ್ಟ ಪರೀಕ್ಷಿಸಲು ಕಣಕ್ಕಿಳಿದಿದ್ದಾರೆ,. ಜೆಡಿಎಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಕುಮಾರ ಸ್ವಾಮಿ ವಿರುದ್ಧ ಕಾಂಗ್ರೆಸ್ ನಿಂದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ ಇಕ್ಬಾಲ್ ಮತ್ತು ಬಿಜೆಪಿಯಿಂದ ಲೀಲಾವತಿ ಸ್ಪರ್ಧಿಸಿದ್ದಾರೆ.
ಕುಮಾರ ಸ್ವಾಮಿ ಮತ್ತು ಡಿ,ಕೆ ಶಿವಕುಮಾರ್ ನಡುವೆ ರಹಸ್ಯ ಮಾತುಕತೆ ನಡೆದಿದ್ದು, ಕನಕಪುರದಲ್ಲಿ ಡಿಕೆಶಿ ವಿರುದ್ಧ ದುರ್ಬಲ ಅಭ್ಯರ್ಥಿ ನಾರಾಯಣ ಸ್ವಾಮಿ ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ರಾಮನಗರದಲ್ಲಿ ಕುಮಾರ ಸ್ವಾಮಿ ವಿರುದ್ಧ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರನ್ನು ಕಣಕ್ಕಿಳಿಸದೇ ಲೀಲಾವತಿ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ಒಕ್ಕಲಿಗ ಪ್ರಾಬಲ್ಯವಿರುವ ರಾಮನಗರ ವಿಧಾನ ಸಭಾ ಕ್ಷೇತ್ರದಲ್ಲಿ ಕುಮಾರ ಸ್ವಾಮಿ ಅಪ್ರತಿಮ ನಾಯಕನಾಗಿದ್ದಾರೆ, ಈ ಕ್ಷೇತ್ರ ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ಕೊಡುಗೆಯಾಗಿ ನೀಡಿದೆ, ಕೆಂಗಲ್ ಹನುಮಂತಯ್ಯ, ಎಚ್.ಡಿ ದೇವೇಗೌಡ ಮತ್ತು ಎಚ್ ಡಿ ಕುಮಾರ ಸ್ವಾಮಿ.
ಜಾತಿ ಸಮೀಕರಲಣ ಹೊರತು ಪಡಿಸಿದರೇ ಕುಮಾರ ಸ್ವಾಮಿ ಈ ಕ್ಷೇತ್ರ ಎಲ್ಲಾ ಸಮುದಾಯ ಮತದಾರರೊಡನೆ ಉತ್ತಮ ಸಂಪರ್ಕ ಹೊಂದಿದ್ದಾರೆ, 2007 ರಲ್ಲಿ ಕುಮಾರ ಸ್ವಾಮಿ ಸಿಎಂ ಆಗಿದ್ದಾಗ ರಾಮನಗರಕ್ಕೆ ಜಿಲ್ಲಾ ಸ್ಥಾನಮಾನ ನೀಡಿದರು, ಮತದಾರರ ಮನಸ್ಸನ್ನು ಅರಿತಿರುವ ಕುಮಾರ ಸ್ವಾಮಿ ರಾಮನಗರದಲ್ಲಿ ಕೇವಲ ಒಂದು ದಿನ ಮಾತ್ರ ಪ್ರಚಾರ ನಡೆಸಲಿದ್ದಾರೆ,ಮೇ 10 ಎಚ್ ಡಿಕೆ ರಾಮನಗರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಕುಮಾರ ಸ್ವಾಮಿ ಅವರನ್ನು ಬಿಟ್ಟು ಬೇರೆ ನಾಯಕರಿಗೆ ಮತದಾನ ಮಾಡಲು ನಮಗೆ ಕಾರಣವಿಲ್ಲ, ಅವರು ಅಧಿಕಾರದಲ್ಲಿ ಇರದಿದ್ದರೂ ಕ್ಷೇತ್ರದಲ್ಲಿಯೇ ಹೆಚ್ಚಿನ ಸಮಯ ಕಳೆಯುತ್ತಾರೆ, ಅವರು ಸಿಎಂ ಆಗಿದ್ದಾಗ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ, ಅವರನ್ನು ಮತ್ತೆ ಸಿಎಂ ಆಗಿ ನೋಡುವ ಆಸೆ ನಮ್ಮದು ಎಂದು ನಾರಾಯಣ ಎಂಬುವರು ಹೇಳಿದ್ದಾರೆ.
ಬೆಂಗಳೂರಿನಿಂದ ರಾಮಗರ 45 ಕಿಮೀ ದೂರದಲ್ಲಿದೆ, ನಾಗರಿಕ ಸೌಲಭ್ಯಗಳ ಕೊರತೆ, ನೀರಾವರಿ ಸೌಲಭ್ಯಗಳ ಕೊರತೆಯಿದೆ , ಹೀಗಾಗಿ ಇಲ್ಲಿನ ಜನ ಶಾಶ್ವತ ನೀರಾವರಿ ಕಾಮಗಾರಿ ಬಯಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSH D Kumaraswamyಜೆಡಿಎಸ್Karnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆRamanagara constituencyಎಚ್.ಡಿ ಕುಮಾರ ಸ್ವಾಮಿ. ರಾಮನಗರ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


