ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧದ ಮುತಾಲಿಕ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಕರ್ನಾಟಕ ವಿಧಾಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮದ ಹೆಸರಿನಲ್ಲಿ ಮತ ಯಾಚಿಸುತ್ತಿದೆ ಎಂದು ಆರೋಪಿಸಿ....

Published On :
ನವದೆಹಲಿ: ಕರ್ನಾಟಕ ವಿಧಾಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮದ ಹೆಸರಿನಲ್ಲಿ ಮತ ಯಾಚಿಸುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣಾ ಪ್ರಕ್ರಿಯೆ ಆರಂಭವಾದ ನಂತರ ಯಾವುದೇ ಕೋರ್ಟ್ ಅದರಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ತೀರ್ಪುಗಳನ್ನು ನೀಡಿದೆ ಎಂದು ಹೇಳಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಮುತಾಲಿಕ್ ಅರ್ಜಿಯನನ್ನು ವಜಾಗೊಳಿಸಿದೆ.
ಅಲ್ಪ ಸಂಖ್ಯಾತ ಸಮುದಾಯವನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮೇಲೆತ್ತುವ ಭರವಸೆ ನೀಡುವುದು ಧರ್ಮದ ಹೆಸರಿನಲ್ಲಿ ಮತಯಾಚಿಸಿದಂತೆ ಆಗುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
'ಈ ಹಿಂದೆ ಧರ್ಮದ ಹೆಸರಲ್ಲಿ ಮತ ಯಾಚನೆ ಮಾಡದಿರುವಂತೆ ಏಳು ಸದಸ್ಯರ ಸುಪ್ರೀಂ ಪೀಠ ನಿರ್ದೇಶನ ನೀಡಿದ್ದರೂ ಅದನ್ನು ಉಲ್ಲಂಘಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಧರ್ಮದ ಹೆಸರನ್ನು ದುರ್ಬಳಕೆ ಮಾಡಿಕೊಂಡಿದೆ. ಇದೊಂದು ಜರೂರಿನ ಪ್ರಕರಣವಾಗಿದ್ದು ತುರ್ತು ವಿಚಾರಣೆ ನಡೆಸಬೇಕು' ಎಂದು ಮುತಾಲಿಕ್ ಪರ ವಕೀಲ ವಿಷ್ಣು ಜೈನ್ ಮನವಿ ಮಾಡಿದ್ದರು.
'ಪ್ರಮಾದಪೂರಿತ ಪ್ರಣಾಳಿಕೆ ಪ್ರಕಟಿಸಿದ ಕಾಂಗ್ರೆಸ್ ಪಕ್ಷವನ್ನು ದಂಡಿಸಬೇಕು. ಜತೆಗೆ ಈ ಚುನಾವಣೆಯಲ್ಲಿ ಆ ಪಕ್ಷದ ಅಭ್ಯರ್ಥಿಗಳನ್ನು 'ಅನರ್ಹ'ರೆಂದು ಪರಿಗಣಿಸಬೇಕು. ಮತಪತ್ರದಲ್ಲಿ ಇರುವ ಅವರ ಹೆಸರನ್ನು ಹೊಡೆದು ಹಾಕಬೇಕು' ಎಂದು ಅರ್ಜಿದಾರರು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


