ಮತದಾನಕ್ಕೆ ಇನ್ನು ಎರಡೇ ದಿನ: 'ಅಸಹ್ಯ'ಕರ ಮಟ್ಟ ತಲುಪಿದ ಚುನಾವಣಾ ಪ್ರಚಾರ!
ಬುಧವಾರ ನಡೆದ ಚುನಾವಣಾ ಪ್ರಚಾರ ರ್ಯಾಲಿ ಜನರಿಗೆ ತೀರಾ ಅಸಹ್ಯ ಮೂಡಿಸಿದೆ.ರಾಷ್ಟ್ರ ಮಟ್ಟದ ನಾಯಕರ ಪರಸ್ಪರ ವಯಕ್ತಿಕ ನಿಂದನೆ ಎಲ್ಲರ ಅಪಹಾಸ್ಯಕ್ಕೆ ಕಾರಣವಾಗಿದೆ...

Published On :
ಬೆಂಗಳೂರು/ ಬಂಗಾರಪೇಟೆ/ ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ, ಆದರೆ ಬುಧವಾರ ನಡೆದ ಚುನಾವಣಾ ಪ್ರಚಾರ ರ್ಯಾಲಿ ಜನರಿಗೆ ತೀರಾ ಅಸಹ್ಯ ಮೂಡಿಸಿದೆ.ರಾಷ್ಟ್ರ ಮಟ್ಟದ ನಾಯಕರ ಪರಸ್ಪರ ವಯಕ್ತಿಕ ನಿಂದನೆ ಎಲ್ಲರ ಅಪಹಾಸ್ಯಕ್ಕೆ ಕಾರಣವಾಗಿದೆ.
ತಾನು ಪ್ರಧಾನ ಮಂತ್ರಿ ಯಾಗುವುದಕ್ಕೆ ಸಿದ್ಧ ಎಂದು ರಾಹುಲ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದು ದುರಂಹಕಾರದ ಪರಮಾವಧಿ ಎಂದು ಜರಿದಿದ್ದಾರೆ. ಬಂಗಾರಪೇಟೆಯಲ್ಲಿ ಮಾತನಾಡಿದ ಮೋದಿ, ನಾನು ಪ್ರಧಾನಿ ಮಂತ್ರಿಯಾಗುವುದಕ್ಕೆ ಸಿದ್ದ ಎಂದು ಹೇಳಿರುವು ಅವರ ಅಹಂಕಾರದ ಮಟ್ಟವನ್ನು ತೋರುತ್ತದೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಅವರ ಈ ಹೇಳಿಕೆ ಅವರ ಅಪ್ರಬುದ್ಧತೆ ತೋರುತ್ತದೆ. ಅವರ ಈ ಹೇಳಿಕೆ ಪಕ್ಷದಲ್ಲಿನ ಹಿರಿಯ ನಾಯಕರಿಗೆ ಅವಮಾನ ಮಾಡಿದಂತಲ್ಲವೇ ಎಂದು ಹೇಳಿದ್ದಾರೆ.
10 ವರ್ಷಗಳಿಂದ ದೇಶವನ್ನು ಆಳಿದ ಪಕ್ಷವೂ ರಾಜ್ಯವನ್ನು ಕಳೆದು ಕೊಳ್ಳುತ್ತಿದೆ. ಆದರೆ ಇಲ್ಲಿಯವರೆಗೂ ಅವರ ಅಹಂಕಾರ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಬೆಂಗಳೂರಿನಲ್ಲಿ ರೋಡ್ ಶೋ ನಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪದೇ ಪದೇ ರಾಜ್ಯಕ್ಕೆ ಬರುತ್ತಿರುವ ಮೋದಿ, ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ನನ್ನನ್ನು ಹಾಸ್ಯ ಮಾಡಿದ್ದಾರೆ, ಇದು ಪ್ರಧಾನ ಮಂತ್ರಿ ಹುದ್ದೆಗೆ ಘನತೆ ಅಲ್ಲ, ಮೋದಿ ಮಹಾನ್ ಸುಳ್ಳುಗಾರ, ಸುಳ್ಳುಗಳನ್ನು ಹೇಳುವ ಮೂಲಕ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ರಾಹುಲ್ ತಿರುಗೇಟು ನೀಡಿದ್ದಾರೆ.
ಇನ್ನೂ ಬೆಳಗಾವಿ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಆರ್ .ಆರ್ ನಗರದಲ್ಲಿ ಪತ್ತೆಯಾದ ನಕಲಿ ಗುರುತಿನ ಚೀಟಿ ಪತ್ತೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಿತೂರಿ ವಿರುದ್ಧ ಜನ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ. ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗುವಂತ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ.ನಕಲಿ ಐಡಿ ಕಾರ್ಡ್ ಮುದ್ರಿಸುವ ಅವಶ್ಯಕತೆ ಏನಿತ್ತು. ಅದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ . ಆರ್ ಆರ್ ನಗರದಲ್ಲಿ 4 ಲಕ್ಷ ಮತದಾರರಿದ್ದು, ಅದರಲ್ಲಿ 1 ಲಕ್ಷ ನಕಲಿ ಮತದಾರರಿದ್ದಾರೆ, ಸುಮಾರು 40 ರಿಂದ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇದೇ ರೀತಿಯ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿRahul Gandhiರಾಹುಲ್ ಗಾಂಧಿcampaignಪ್ರಚಾರKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


