ಇದು ನನ್ನ ಕೊನೆಯ ಚುನಾವಣೆ ಸ್ಪರ್ಧೆ: ಸಿದ್ದರಾಮಯ್ಯ
ರಾಜ್ಯ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರ ನಿನ್ನೆ ಅಂತ್ಯಗೊಂಡಿದ್ದು, ಇಂದು ಮನೆಮನೆಗೆ ...

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರ ನಿನ್ನೆ ಅಂತ್ಯಗೊಂಡಿದ್ದು, ಇಂದು ಮನೆಮನೆಗೆ ತೆರಳಿ ಪ್ರಚಾರ, ಪೂರ್ವ ದಾಖಲು ಆಡಿಯೊ ಸಂದೇಶಗಳ ಮೂಲಕ ಮಾತ್ರ ಪ್ರಚಾರ ನಡೆಸಲು ಅವಕಾಶವಿದೆ.
ನಿನ್ನೆ ತಮ್ಮ ಪೂರ್ವ ದಾಖಲು ಧ್ವನಿ ಸಂದೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಚುನಾವಣೆ ತಮ್ಮ ಕಡೆಯ ಸ್ಪರ್ಧೆಯಾಗಿದ್ದು, ನಾನು ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿಪರ ಕೆಲಸಗಳನ್ನು ಮಾಡಿದ್ದೇನೆ, ನನಗೆ ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುವುದು ಮತದಾರರ ಮೊಬೈಲ್ ಗಳಿಗೆ ಬರುತ್ತಿದ್ದವು.
ಇನ್ನೊಂದು ವಿಷಯವೆಂದರೆ ಚಾಮುಂಡೇಶ್ವರಿ ಕ್ಷೇತ್ರದ ಮತದಾರರಲ್ಲದ ಬೆಂಗಳೂರಿನ ನಿವಾಸಿಗಳ ಮೊಬೈಲ್ ಗಳಿಗೆ ಕೂಡ ಈ ಸಂದೇಶ ಬರುತ್ತಿದ್ದವು. ಜನರಿಗೆ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಕಳೆದ 5 ವರ್ಷಗಳ ಆಡಳಿತದಲ್ಲಿ ಈಡೇರಿಸಿದೆ ಎಂಬ ಸಂದೇಶಗಳು ಕೂಡ ಬರುತ್ತಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


