ಪ್ರಧಾನಿ ವರ್ಚಸ್ಸು ಕುಸಿಯುತ್ತಿದೆ, ಅಮಿತ್ ಶಾ ಹಾಸ್ಯ ಪ್ರದರ್ಶನಕಾರ: ಸಿದ್ದರಾಮಯ್ಯ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಸ್ಯ ಪ್ರದರ್ಶನಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ವಾಡಿದ್ದಾರೆ.

ಮೈಸೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಸ್ಯ ಪ್ರದರ್ಶನಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿಂದು ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಅವರ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅವರ ಭಾಷಣಗಳು ಟೊಳ್ಳಾಗಿವೆ. ಅವರು ಕರ್ನಾಟಕದಲ್ಲಿನ ಮತದಾರರ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಲು ಸಾಧ್ಯವಿಲ್ಲ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರವನ್ನು ಸೋಲಿಸಬೇಕೆಂಬ ನಿಟ್ಟಿನಲ್ಲಿ ಅಮಿತ್ ಶಾ, ನರೇಂದ್ರಮೋದಿ ರಾಜ್ಯದ ವಿವಿಧೆಡೆ ಇನ್ನಿಲ್ಲದಂತೆ ಪ್ರಚಾರ ನಡೆಸಿದ್ದಾರೆ. ಕೇಂದ್ರ ಸಚಿವರು , ಬಿಜೆಪಿ ಮುಖಂಡರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಅಬ್ಬರದ ಪ್ರಚಾರ ನಡೆಸಿದ್ದರೂ ಬಿಜೆಪಿ ಗೆಲ್ಲಲ ಎಂದು ಹೇಳಿದರು.
ಚುನಾವಣಾ ಸಂದರ್ಭದಲ್ಲಿ ಕೇಂದ್ರದ ಹುನ್ನಾರದಿಂದಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ನಾಯಕರು ಹಾಗೂ ಅವರ ಆಪ್ತರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿದರು.
ಮೇ 8 ರಂದು ಬದಾಮಿಯಲ್ಲಿ ರೆಸಾರ್ಟ್ ಮೇಲೆ ನಡೆದ ದಾಳಿಯಲ್ಲಿ ಕಾಂಗ್ರೆಸ್ ನಂಟು ಹೊರಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಯ ಮೂಡಿಸಲಾಗಿತ್ತು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ 120 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


