ಮೇ.17ರಂದು ಹೊಸ ಸರ್ಕಾರ ರಚನೆ ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮೇ.17 ರಂದು ನೂತನ ಸರ್ಕಾರ ರಚನೆ ಖಚಿತ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ...

Published On :
ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮೇ.17 ರಂದು ನೂತನ ಸರ್ಕಾರ ರಚನೆ ಖಚಿತ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಯಡಿಯೂರಪ್ಪ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಮೇ.15ರಂದು ದೆಹಲಿಗೆ ತೆರಳುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಅವರಿಗೆ ಆಹ್ವಾನ ನೀಡಿ, ಮೇ.17 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆಂದು ಹೇಳಿದ್ದಾರೆ.
224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 145-150 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. 224ರಲ್ಲಿ ಎರಡು ಕ್ಷೇತ್ರಗಳಲ್ಲಿಂದು ಚುನಾವಣೆ ನಡೆಯುತ್ತಿಲ್ಲ. ಇಡೀ ರಾಜ್ಯದಾದ್ಯಂತ 3 ಸುತ್ತು ಪ್ರವಾಸ ಕೈಗೊಂಡಿದ್ದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಶೇ.100 ವಿಶ್ವಾಸವಿದೆ. ಚುನಾವಣೋತ್ತರ ಸಮೀಕ್ಷೆಗಳು ಇಂದು ಸಂಜೆಯೇ ಫಲಿತಾಂಶವನ್ನು ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಜನರು ಬೇಸತ್ತು ಹೋಗಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿChief Ministerಮುಖ್ಯಮಂತ್ರಿYeddyurappaಯಡಿಯೂರಪ್ಪKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


