ರಾಜರಾಜೇಶ್ವರಿನಗರ ಚುನಾವಣೆ ಮುಂದೂಡಿಕೆ: ಚುನಾವಣಾ ಆಯೋಗದ 'ಅಸಾಧಾರಣ ಕ್ರಮ': ಪಿಯೂಶ್ ಗೋಯಲ್
ಅಪಾರ್ಟ್ವೆುಂಟ್ವೊಂದರಲ್ಲಿ ಸುಮಾರು 10 ಸಾವಿರ ಮತದಾರರ ಗುರುತಿನ ಚೀಟಿಗಳ ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ...

Published On :
ಬೆಂಗಳೂರು: ಅಪಾರ್ಟ್ವೆುಂಟ್ವೊಂದರಲ್ಲಿ ಸುಮಾರು 10 ಸಾವಿರ ಮತದಾರರ ಗುರುತಿನ ಚೀಟಿಗಳ ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದ್ದು ಇದು ಚುನಾವಣಾ ಆಯೋಗದ ಅಸಾಧಾರಣ ನಿರ್ಧಾರ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.
ಆರ್ ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಿರುವುದು ಚುನಾವಣಾ ಆಯೋಗ ಅಸಾಧಾರಣ ಕ್ರಮ ಎಂದು ಪಿಯೂಶ್ ಗೋಯಲ್ ಆಯೋಗದ ನಿರ್ಧಾರವನ್ನು ಪ್ರಶಂಸಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಿಯೂಶ್ ಗೋಯಲ್ ಅವರು, ಭ್ರಷ್ಟ ಚುನಾವಣಾ ಆಚರಣೆ ಮತ್ತು ಲಂಚದ ಪ್ರಯತ್ನಗಳ ನಿರ್ದಿಷ್ಟ ನಿದರ್ಶನಗಳನ್ನು ಚುನಾವಣಾ ಆಯೋಗ ಮತ್ತು ಅವರ ವಿಶೇಷ ವೀಕ್ಷಕರು ಪತ್ತೆ ಮಾಡಿದ್ದಾರೆ. ಇನ್ನು ಚುನಾವಣೆ ಗೆಲ್ಲಲು ಕಾಂಗ್ರೆಸ್ ಏನನ್ನು ಬೇಕಾದರು ಮಾಡುತ್ತದೆ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಹೇಳಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಟ್ರಂಕ್ ನಲ್ಲಿ 95 ಲಕ್ಷ ರುಪಾಯಿ ಹಣ ಪತ್ತೆಯಾದ ಹಿನ್ನೆಯಲ್ಲಿ ಆ ಕ್ಷೇತ್ರದ ಚುನಾವಣೆಯನ್ನು ಮೇ ತಿಂಗಳ 28ಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದರು.
ನಾಳೆ ರಾಜ್ಯದ 222 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಆದರೆ ಆರ್ .ಆರ್.ನಗರ ಕ್ಷೇತ್ರದ ಚುನಾವಣೆ ಮೇ 28ರಂದು ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಂಜೀವ್ ಕುಮಾರ್ ಹೇಳಿದರು.
ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗPiyush Goyalಪಿಯೂಶ್ ಗೋಯಲ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆRR Nagar Electionಆರ್ ಆರ್ ನಗರ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


