ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ; ಹೆಚ್.ಡಿ.ದೇವೇಗೌಡ
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌರ ಅವರು ಶನಿವಾರ ಹೇಳಿದ್ದಾರೆ...

Published On :
ಹಾಸನ; ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌರ ಅವರು ಶನಿವಾರ ಹೇಳಿದ್ದಾರೆ.
ಹಾಸನದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಜೆಡಿಎಸ್ ಉತ್ತಮ ಕಾರ್ಯಗಳನ್ನು ಮಾಡಿದ್ದು, ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಬೂತ್ ನಂ.224ರಲ್ಲಿ ದೇವೇಗೌಡ ಅವರು ತಮ್ಮ ಪತ್ನಿ ಚೆನ್ನಮ್ಮ ದೇವೇಗೌಡ, ಪುತ್ರ ಹೆಚ್.ಡಿ.ರೇವಣ್ಣ ಹಾಗೂ ಇತರೆ ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ಮತದಾನ ಮಾಡಿದರು.
ಮತದಾನ ಪ್ರಕ್ರಿಯೆ ಆರಂಭವಾಗುವುದಕ್ಕೂ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ನಿರ್ಮಲಾನಂದನಾಥ ಮಹಾಸ್ವಾಮಿಗಳನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSbjpಬಿಜೆಪಿಜೆಡಿಎಸ್Deve Gowdaಹೆಚ್.ಡಿ.ದೇವೇಗೌಡKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


