ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: 222 ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿ

ಕರ್ನಾಟಕದಲ್ಲಿ ಶನಿವಾರ ಒಟ್ಟು 5.06 ಕೋಟಿ ಮತದಾರರು ಹೊಸ ಸರ್ಕಾರ ರಚನೆಗೆ ತಮ್ಮ ಹಕ್ಕು ...

ಕರ್ನಾಟಕ ವಿಧಾನಸಭೆ ಚುನಾವಣೆ: 222 ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿ
ಹುಬ್ಬಳ್ಳಿಯಲ್ಲಿ ಮತ ಚಲಾಯಿಸಲು ಸರದಿಯಲ್ಲಿ ನಿಂತ ಜನರು
Published On :

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಒಟ್ಟು 5.06 ಕೋಟಿ ಮತದಾರರು ಹೊಸ ಸರ್ಕಾರ ರಚನೆಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರ, ಮತದಾರರನ್ನು ಸೆಳೆಯುವಲ್ಲಿ ಅಭ್ಯರ್ಥಿಗಳ ವಿವಿಧ ರೀತಿಯ ಕಸರತ್ತುಗಳ ನಂತರ ರಾಜ್ಯದಲ್ಲಿ ಇಂದು ಮತದಾನ ಆರಂಭವಾಗಿ ಒಂದೂವರೆ ಗಂಟೆ ಕಳೆದಿದೆ.

ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಇಂದು ಬೆಳಗ್ಗೆಯೇ ಮಂಗಳೂರಿನಲ್ಲಿ ಮತ ಚಲಾಯಿಸಿದರು.

ರೈಲ್ವೆ ಖಾತೆ ಮಾಜಿ ಸಚಿವ ಕೆ ಎಚ್ ಮುನಿಯಪ್ಪ ಅವರ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಶಶಿಧರ್ ಕೋಲಾರ ಚಿನ್ನದ ಗಣಿಯ ಬೆತಮಂಗಳದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಚಿತ್ರದುರ್ಗ ನಗರದ ಸಂಪಿಗೆ ಸಿದ್ದೇಶ್ವರ ಹೆಚ್ ಪಿಎಸ್ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಗಳಲ್ಲಿ ದೋಷ ಕಂಡುಬಂದ ಕಾರಣ ಇನ್ನೂ ಮತ ಚಲಾವಣೆ ಆರಂಭವಾಗಿಲ್ಲ.

ಬೆಂಗಳೂರು ನಗರದ ಮತಗಟ್ಟೆಗಳಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಮತಗಟ್ಟೆಯ ಸುತ್ತಮುತ್ತ ಜನರು ಗುಂಪುಗಟ್ಟಿ ನಿಲ್ಲಲು ಪೊಲೀಸರು ಮತ್ತು ಭದ್ರತಾ ಪಡೆ ಬಿಡುತ್ತಿಲ್ಲ. ಶಾಂತಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆಗಳಲ್ಲಿ ಮತಗಟ್ಟೆ ಸಮೀಪ ವಾಹನ ನಿಲುಗಡೆಗೆ ಮತ್ತು ಮತಗಟ್ಟೆ ಸುತ್ತಮುತ್ತ ಹೋಗಲು ಬಿಡುತ್ತಿಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಮತಗಟ್ಟೆ ಸಂಖ್ಯೆ 111ರಲ್ಲಿ ಇವಿಎಂ ದೋಷದಿಂದ ಮತದಾನ ತಡವಾಗಿ ಆರಂಭವಾಯಿತು.

ಕೇಂದ್ರ ಸಚಿವ ಸದಾನಂದ ಗೌಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ತಮ್ಮ ಹಕ್ಕು ಚಲಾವಣೆಗೆ ಮುನ್ನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ  ಹೆಚ್ ಎಸ್ ಆರ್ ಲೇ ಔಟ್ ಲಾರೆನ್ಸ್ ಇಂಗ್ಲಿಷ್ ಸ್ಕೂಲ್  ಮತಗಟ್ಟೆಯಲ್ಲಿ ಇಂದು ಬೆಳಗ್ಗೆ ಮತ ಚಲಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.