ಕಾಂಗ್ರೆಸ್ ಬಗ್ಗೆ ವರುಣಾ ಜನತೆಗೆ ತೃಪ್ತಿ ಇದೆ: ಸಿಎಂ ಪುತ್ರ ಡಾ. ಯತೀಂದ್ರ
ಕಾಂಗ್ರೆಸ್ ಸರ್ಕಾರ ಮತ್ತು ಅದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರುಣಾ ಕ್ಷೇತ್ರದ ಜನತೆಗೆ ತೃಪ್ತಿ ಇದೆ ಎಂದು...

Published On :
ಮೈಸೂರು: ಕಾಂಗ್ರೆಸ್ ಸರ್ಕಾರ ಮತ್ತು ಅದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರುಣಾ ಕ್ಷೇತ್ರದ ಜನತೆಗೆ ತೃಪ್ತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ಅವರು ಶನಿವಾರ ಹೇಳಿದ್ದಾರೆ.
ನಾನು ಕಳೆದ ಒಂದೂವರೆ ವರ್ಷದಿಂದ ವರುಣಾ ಕ್ಷೇತ್ರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇನೆ. ಚುನಾವಣೆ ಪ್ರಚಾರದ ವೇಳೆ ನನಗೆ ಅಂತಹ ಬದಲಾವಣೆ ಏನು ಕಾಣಿಸಲಿಲ್ಲ ಎಂದಿದ್ದಾರೆ.
ನಾನು ಕ್ಷೇತ್ರದ ಯಾವ ಹಳ್ಳಿಗೆ ಭೇಟಿ ನೀಡಿದರೂ ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಪುತ್ರ ಎಎನ್ಐಗೆ ತಿಳಿಸಿದ್ದಾರೆ.
ಇಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 120 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ನಮ್ಮ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ತಳಮಟ್ಟದ ವರದಿ ಮತ್ತು ಸಮೀಕ್ಷೆಯನ್ನು ಆಧರಿಸಿ ಹೇಳಿದ್ದಾರೆ. ಅಲ್ಲದೆ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಜನರ ನಾಡಿ ಮಿಡಿತ ಅರಿತಿದ್ದಾರೆ ಎಂದರು.
ವರುಣಾ ಕ್ಷೇತ್ರದಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪತ್ರ ಬಿವೈ ವಿಜಯೇಂದ್ರ ನಡುವೆ ನೇರ ಹಣಾಹಣಿ ನಡೆಯಬೇಕಿತ್ತು. ಆದರೆ ಅಂತಿಮ ಕ್ಷಣದಲ್ಲಿ ಬಿಜೆಪಿ ಬಸವರಾಜು ಅವರಿಗೆ ಟಿಕೆಟ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


