ವಿಧಾನಸಭೆ ಚುನಾವಣೆ ಅಂತ್ಯ: ಶೇ.67ರಷ್ಟು ಮತದಾನ, ಮತಯಂತ್ರ ಸೇರಿದ ಅಭ್ಯರ್ಥಿಗಳ ಭವಿಷ್ಯ
ವಿಧಾನಸಭೆ ಚುನಾವಣೆಗೆ ಶನಿವಾರ ರಾಜ್ಯಾದ್ಯಂತ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಗೊಂಡಿದ್ದು, ...

Published On :
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಶನಿವಾರ ರಾಜ್ಯಾದ್ಯಂತ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಗೊಂಡಿದ್ದು, ಶೇ.67ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 2,636 ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಶೇ.71ರಷ್ಟು ಮತದಾನವಾಗಿತ್ತು, 2008ರಲ್ಲಿ ಶೇ.64ರಷ್ಟು ಮತದಾನವಾಗಿತ್ತು.
ಸಂಜೆ 6 ಗಂಟೆಯವರೆ ಬೆಂಗಳೂರು ನಗರ - 51, ಕೊಪ್ಪಳ - 70, ಗದಗ - 68, ಚಾಮರಾಜ ನಗರ - 78, ಚಿಕ್ಕಮಗಳೂರು - 70, ಚಿಕ್ಕಬಳ್ಳಾಪುರ - 79, ಚಿತ್ರದುರ್ಗ - 76, ತುಮಕೂರು - 73, ದಕ್ಷಿಣ ಕನ್ನಡ - 73, ದಾವಣಗೆರೆ - 70, ಧಾರವಾಡ- 66, ಬಳ್ಳಾರಿ - 66, ಬಾಗಲಕೋಟೆ - 68, ವಿಜಯಪುರ - 63, ಬೀದರ್ - 59, ಬೆಳಗಾವಿ - 71, ಬೆಂಗಳೂರು ಗ್ರಾಮಾಂತರ - 76, ಮೈಸೂರು- 68, ಮಂಡ್ಯ - 78, ಯಾದಗಿರಿ- 60, ರಾಮನಗರ - 80, ರಾಯಚೂರು - 61, ಹಾವೇರಿ -76, ಹಾಸನ - 77, ಶಿವಮೊಗ್ಗ -73, ಉಡುಪಿ - 75, ಉತ್ತರ ಕನ್ನಡ - 71, ಕೊಡಗು - 69, ಕೋಲಾರ - 77, ಗುಲ್ಬರ್ಗಾ -56, ಬೆಂಗಳೂರು (ಉತ್ತರ) - 49, ಬೆಂಗಳೂರು (ದಕ್ಷಿಣ) - 49, ಬೆಂಗಳೂರು (ಗ್ರಾಮಾಂತರ)- 51ರಷ್ಟು ಮತದಾನವಾಗಿದೆ.
ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತಾದರೂ, ಹಲವೆಡೆ ಮತಯಂತ್ರಗಳು ಕೈಕೊಟ್ಟ ಪರಿಣಾಮ ಮತದಾನ ತಡವಾಯಿತು. ಇನ್ನು ಹಲವು ಮತಗಟ್ಟೆಗಳಲ್ಲಿ ವಿದ್ಯುತ್ ಕೈ ಕೊಟ್ಟ ಕಾರಣ ಚುನಾವಣಾ ಸಿಬ್ಬಂದಿ ಗೊಂದಲಕ್ಕೀಡಾದರು.
ಇನ್ನು ಬೆಂಗಳೂರಿನ ಎರಡು ಕಡೆ ನಕಲಿ ಮತದಾನ ಆರೋಪ ಹಿನ್ನೆಲೆಯಲ್ಲಿ ಬಸವನಗುಡಿ ಕ್ಷೇತ್ರದ ಶ್ರೀನಗರದಲ್ಲಿ ನಾಗಮಂಗಲ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್ ಅಡ್ಡಗಟ್ಟಿ ಸ್ಥಳೀಯರು ಗಲಾಟೆ ಮಾಡಿದ್ದಾರೆ.
15ನೇ ವಿಧಾನಸಭೆಗೆ ಒಂದೇ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯಾದ್ಯಂತ ಒಟ್ಟು 58,546 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.
ರಾಜ್ಯದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಮಾತ್ರ ಇಂದು ಚುನಾವಣೆ ನಡೆಯುತ್ತಿದೆ. ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸುಮಾರು 10 ಸಾವಿರ ವೋಟರ್ ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ಇನ್ನು ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಚುನಾವಣೆಯನ್ನು ಸಹ ಮುಂದೂಡಲಾಗಿದೆ.
ಹೊಳೆನರಸಿಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೇಲೆ ದಾಳಿ
ಹೊಳೆನರಸಿಪುರ ಕ್ಷೇತ್ರದ ಪರಸನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಪಿ ಮಂಜೇಗೌಡ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಪೊಂದು ದಾಳಿ ಮಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಜೆಡಿಎಸ್ ಅಭ್ಯರ್ಥಿ ಎಚ್ ಡಿ ರೇವಣ್ಣ ಕಡೆಯವರು ಎನ್ನಲಾದ ಕೆಲ ಯುವಕರ ಗುಂಪು ಮಂಜೇಗೌಡ ಅವರ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ಅವರನ್ನು ನಿಂದಿಸಿ, ಹಲ್ಲೆ ಯತ್ನಿಸಿದ್ದಾರೆ. ಈ ಸಂಬಂಧ ಮಂಜೇಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಹಾಸನದ ಮತಗಟ್ಟೆಯ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಸ್ವಲ್ಪ ಕಾಲ ಮತದಾನಕ್ಕೆ ಅಡಚಣೆ ಉಂಟಾಯಿತು.
ಕೆಲ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


