ಕಡಿಮೆ ಪ್ರಮಾಣದ ಮತದಾನದಿಂದ ಬಿಜೆಪಿಗೆ ಹಾನಿ, ಕಾಂಗ್ರೆಸ್ ಮೇಲೂ ಪರಿಣಾಮ ಸಾಧ್ಯತೆ
ಹೈದ್ರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿರುವುದು ಬಿಜೆಪಿ ನಿರೀಕ್ಷೆಗಳಿಗೆ ಹಾನಿಯಾಗಬಹುದು, ಕಾಂಗ್ರೆಸ್ ಮೇಲೂ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬಂತಹ ವಿಶ್ಲೇಷಣೆಗಳು ಕೇಳಿಬರುತ್ತಿವೆ

ಕಲಬುರಗಿ : ಹೈದ್ರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿರುವುದು ಬಿಜೆಪಿ ನಿರೀಕ್ಷೆಗಳಿಗೆ ಹಾನಿಯಾಗಬಹುದು, ಕಾಂಗ್ರೆಸ್ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ರಾಜಕೀಯ ತಜ್ಞ ಚಂದ್ರಕಾಂತ್ ಯತ್ನೂರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರೀಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ಪ್ರೋಫೆಸರ್ ಆಗಿರುವ ಯತ್ನೂರು ಹೇಳುವಂತೆ, ಕಡಿಮೆ ಪ್ರಮಾಣದ ಮತದಾನ ಬಿಜೆಪಿಗೆ ಕೆಟ್ಟ ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ಕೂಡಾ ಇದರಿಂದ ಹೊರತಾಗಿಲ್ಲ ಎಂದು ಅವರು ಹೇಳಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ 40 ಸ್ಥಾನಗಳ ಪೈಕಿ ಕಾಂಗ್ರೆಸ್ 31 ಸ್ಥಾನಗಳಲ್ಲಿ ಬಲಿಷ್ಠವಾಗಿದೆ. ಬಿಜೆಪಿ ಕನಿಷ್ಠ 15 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಭರವಸೆ ಹೊಂದಿದ್ದು, 8ರಿಂದ 10 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಕಾಂಗ್ರೆಸ್ 25 ಸ್ಥಾನಗಳಿಗೆ ಹೋಗಬಹುದು ಎಂದು ಅವರು ಹೇಳುತ್ತಾರೆ.
ಅಧಿಕ ತಾಪಮಾನ ಹಾಗೂ ಬಿರುಗಾಳಿ ಸಹಿತ ಮಳೆ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಕಡಿಮೆ ಪ್ರಮಾಣದ ಮತದಾನವಾಗಲು ಕಾರಣವಾಗಿದೆ. ಉದ್ಯೋಗ ಅರಸಿ ಬೆಂಗಳೂರು ನಂತಹ ನಗರಗಳಿಗೆ ವಲಸೆ ಹೋಗಿರುವುದು ಮತ್ತೊಂದು ಕಾರಣವಾಗಿದೆ.
ಜಾಗೃತಿ ಕಾರ್ಯಕ್ರಮಗಳ ಹೊರತಾಗಿಯೂ ಜನ ಏಕೆ ಚುನಾವಣಾ ಕಾರ್ಯದಲ್ಲಿ ಪಾಲ್ಗೊಂಡಿಲ್ಲ ಎಂಬುದರ ಬಗ್ಗೆ ಸರ್ಕಾರ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


