ಬಂಧನ ಭೀತಿ: ತಲೆಮರೆಸಿಕೊಂಡ ಶಾಸಕ ಮುನಿರತ್ನ?
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ...

Published On :
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಬಂಧನ ಭೀತಿ ಎದುರಿಸುತ್ತಿರುವ ಮುನಿರತ್ನ ಅವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದೀಗ ಮುನಿರತ್ನ ಅವರು ತಲೆಮರೆಸಿಕೊಂಡಿದ್ದು ಯಾರಾ ಕರೆಗೆ ಸಿಗುತ್ತಿಲ್ಲ. ಮನೆಯಲ್ಲಿಯೂ ಇಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬಂಧನ ಭೀತಿಯಲ್ಲಿರುವ ಮುನಿರತ್ನ ಅವರು ತೆರೆಮರೆಯಲ್ಲಿ ಜಾಮೀನಿಗಾಗಿ ಹೊಡಾಡುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮುನಿರತ್ನ ಸೇರಿ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 468, 471ರಡಿ ಪ್ರಕರಣ ದಾಖಲಿಸುವಂತೆ ನಗರದ 24ನೇ ಎಸಿಎಂಎಂ ಕೋರ್ಟ್ ನಲ್ಲಿ ಜಾಲಹಳ್ಳಿ ಪೊಲೀಸರಿಗೆ ಆದೇಶಿಸಿತ್ತು.
ಗುರುತಿನ ಚೀಟಿ ಯನ್ನು ರೇಡ್ ಮಾಡಲು ಹೋಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ. ರಾಕೇಶ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CourtFIRನ್ಯಾಯಾಲಯRajarajeshwari NagarMunirathnaಮುನಿರತ್ನಎಫ್ ಐ ಆರ್ಗುರುತಿನ ಚೀಟಿರಾಜರಾಜೇಶ್ವರಿ ನಗರಕರ್ನಾಟಕ ವಿಧಾನಸಭೆ ಚುನಾವಣೆKarnataka Assembly Electionsvoter ID cards
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


