ಮಂಡ್ಯ ಸಂಸದ ಸಿ.ಎಸ್ ಪುಟ್ಟರಾಜು ವಿರುದ್ಧ ಎಫ್ ಐ ಆರ್ ದಾಖಲು!
ರೈತ ಸಂಘದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ವಿರುದ್ದ ಪಾಂಡವಪುರ ಪೊಲೀಸ್ ....

Published On :
ಮಂಡ್ಯ: ರೈತ ಸಂಘದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ವಿರುದ್ದ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕ್ಯಾತನಹಳ್ಳಿ ಗ್ರಾಮದ ಕೆ.ಎನ್ ದೀಕ್ಷಿತ್ ಎಂಬವರು ಸಂಸದರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಧಾನಸಭಾ ಚುನಾವಣೆಯ ಮತದಾನ ನಡೆಯುವ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಪರ ಚಿನಕುರುಳಿ ಗ್ರಾಮದಲ್ಲಿ ಪ್ರಚಾರ ನಡೆಸುವ ವೇಳೆ ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದರು ಎಂದು ದೀಕ್ಷಿತ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಸಂಸದ ಪುಟ್ಟರಾಜು ವಿರುದ್ದ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
FIRಎಫ್ ಐ ಆರ್Karnataka Rajya Raitha SanghaCS PuttarajuMandya MPಸಿ.ಎಸ್ ಪುಟ್ಟರಾಜುಮಂಡ್ಯ ಸಂಸದರಾಜ್ಯ ರೈತ ಸಂಘ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


