ರಾಜಕೀಯ

ರಾಜಭವನಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರ ರಚನೆಗೆ ಹಕ್ಕು ಮಂಡನೆ!

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ.

ರಾಜಭವನಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರ ರಚನೆಗೆ ಹಕ್ಕು ಮಂಡನೆ!
ಸರ್ಕಾರ ರಚನೆಗೆ ರಾಜಭವನದಲ್ಲಿ ಹಕ್ಕು ಮಂಡಿಸಿದ ಯಡಿಯೂರಪ್ಪ, ಅನಂತ್ ಕುಮಾರ್. ಶೋಭಾ ಕರಂದ್ಲಾಜೆ
Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 104  ಸ್ಥಾನಗಳನ್ನು ಪಡೆದಿರುವ ಬಿಜೆಪಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ. 
ಸರ್ಕಾರ ರಚನೆ ಮಾಡುವಷ್ಟು ಶಾಸಕರ ಬಲ (112)  ಇಲ್ಲವಾದರೂ ಅತಿ ಹೆಚ್ಚು ಶಾಸಕರ ಸಂಖ್ಯೆ ಹೊಂದಿರುವ ಏಕೈಕ ಪಕ್ಷ ಬಿಜೆಪಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಅವಕಾಶ ಕೋರಿದ್ದಾರೆ. 
ಇತ್ತ ಜೆಡಿಎಸ್-ಕಾಂಗ್ರೆಸ್ ಸಹ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಿದ್ದು,  ರಾಜಭವನಕ್ಕೆ ತೆರಳಿ ಹೆಚ್ ಡಿ ಕುಮಾರಸ್ವಾಮಿ ಆಗಮಿಸಿ ಸರ್ಕಾರ ರಚನೆಗೆ ಅವಕಾಶ ಕೋರಲಿದ್ದಾರೆ.  ಯಾರಿಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂಬುದು ರಾಜ್ಯಪಾಲರ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ರಾಜ್ಯಪಾಲರ ನಿರ್ಧಾರದ ಮೇಲೆ ಯಾರು  ಸರ್ಕಾರ ರಚನೆ ಮಾಡುತ್ತಾರೆ ಎಂಬುದು ತಿಳಿಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.