ಕಾಂಗ್ರೆಸ್ ಪಕ್ಷದ ವಿಭಜನೆಯ ಸಿದ್ದಾಂತವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ- ಬಿಜೆಪಿ
ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ದಿ ಸಿದ್ದಾಂತದಿಂದ ಆಕರ್ಷಿತಗೊಂಡ ಜನತೆ ಕಾಂಗ್ರೆಸ್ ನ ವಿಭಜನೆಯ ಸಿದ್ದಾಂತವನ್ನು ತಿರಸ್ಕರಿಸಿದ್ದಾರೆ ಎಂದು ಬಿಜೆಪಿಯ ಹಲವು ನಾಯಕರು ಪ್ರತಿಪಾದಿಸಿದ್ದಾರೆ.

ನವದೆಹಲಿ : ಪ್ರಧಾನಿ ನರೇಂದ್ರಮೋದಿ ಅವರ ಅಭಿವೃದ್ದಿ ಸಿದ್ದಾಂತದಿಂದ ಆಕರ್ಷಿತಗೊಂಡ ಜನತೆ ಕಾಂಗ್ರೆಸ್ ನ ವಿಭಜನೆಯ ಸಿದ್ದಾಂತವನ್ನು ತಿರಸ್ಕರಿಸಿದ್ದಾರೆ ಎಂದು ಬಿಜೆಪಿಯ ಹಲವು ನಾಯಕರು ಪ್ರತಿಪಾದಿಸಿದ್ದಾರೆ.
ಬಿಜೆಪಿ 112 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಸ್ಪಷ್ಪ ಬಹುಮತ ದೊರಕುವ ಸಾಧ್ಯತೆ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಸೋಲಲಿದ್ದು, ರಾಹುಲ್ ಗಾಂಧಿ ಪ್ರಧಾನಿಯಾಗುವ ಕನಸು ಈಡೇರಿಸುವುದಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಇಂದು ಪಕ್ಷದ ಪಾಲಿಗೆ ಚಾರಿತ್ರಿಕ ದಿನವಾಗಿದ್ದು, ಕಾಂಗ್ರೆಸ್ ಪಕ್ಷದ ವಿಭಜನೆಯ , ನಕಾರಾತ್ಮಕ ರಾಜಕೀಯವನ್ನು ಜನತೆ ತಿರಸ್ಕರಿಸಿದ್ದು, ಮೋದಿ ಅವರ ಅಭಿವೃದ್ದಿ ಸಿದ್ದಾಂತವನ್ನು ಒಪ್ಪಿಕೊಂಡಿದ್ದಾರೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಗೆಲುವಿನ ಬಳಿಕ ಬಿಜೆಪಿಗೆ ದಕ್ಷಿಣ ಬಾಗಿಲು ತೆರೆದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಹೇಳಿದ್ದಾರೆ.
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಮೂರನೇ ರಾಜ್ಯದ ಸೋಲಾಗಿದ್ದು, ವಿಪಕ್ಷಗಳು ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ಐದನೇ ಸ್ಥಾನಕ್ಕೆ ಹೋಗಲಿದೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಹೇಳಿದ್ದಾರೆ.
ಮತ್ತೊಂದೆಡೆ ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿರುವುದಕ್ಕೆ ಜಮ್ಮು- ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಶ್ಲಾಘಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


