ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಂಬಲು ಅಸಾಧ್ಯ -ಎನ್ ಸಿಪಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಂಬಲು ಅಸಾಧ್ಯವಾಗಿದೆ ಎಂದು ಎನ್ ಸಿಪಿ ಅಭಿಪ್ರಾಯಪಟ್ಟಿದೆ.

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಂಬಲು ಅಸಾಧ್ಯವಾಗಿದೆ ಎಂದು ಎನ್ ಸಿಪಿ ಅಭಿಪ್ರಾಯಪಟ್ಟಿದೆ.
ಶರದ್ ಪವರ್ ನಾಯಕತ್ವದ ಎನ್ ಸಿ ಪಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಹಾಕದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತ್ತು. ಅಲ್ಲದೇ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.
ಕರ್ನಾಟಕದಲ್ಲಿ ಕಾಂಗ್ರೆಸ್ ಉತ್ತಮ ರೀತಿಯಲ್ಲಿತ್ತು. ಸಿದ್ದರಾಮಯ್ಯ ನಾಯಕತ್ವದ ಆಡಳಿತ ವಿರುದ್ಧ ಆಡಳಿತ ವಿರೋಧಿ ಅಲೆ ಇರಲಿಲ್ಲ ಎಂದು ಮಹಾರಾಷ್ಟ್ರ ಎನ್ ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಹೇಳಿದ್ದಾರೆ.
ಜನರ ಮನಸ್ಸಿನಲ್ಲಿ ಏನಿತ್ತೋ ಗೊತ್ತಿಲ್ಲ. ಆದರೆ, ಬಿಜೆಪಿ ಗೆಲುವು ನಂಬಲು ಆಸಾಧ್ಯವಾಗಿದೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಉತ್ತಮ ನಾಯಕರಲ್ಲ , ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ತನ್ನ ಮಿತಿಯನ್ನು ಮೀರಿದ್ದು, ಫಲಿತಾಂಶವನ್ನು ಸೂಕ್ತವಾಗಿ ವಿಶ್ಲೇಷಿಸಬೇಕಾಗಿದೆ, ಜಾತ್ಯತೀತ ಮತಗಳು ಚದುರಿ ಹೋಗಿದ್ದು, ಇವಿಎಂಗಳ ಬಗ್ಗೆ ಶಂಕೆ ಉಂಟು ಮಾಡಿದೆ. ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿ ಗೊಂದಲವನ್ನು ಬಗೆಹರಿಸಬೇಕಿದೆ. ಚುನಾವಣಾ ಆಯೋಗ ಇದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಇನ್ನಿತರ ಪಕ್ಷಗಳೊಂದಿಗೆ ಮಾತುಕತೆ ನಡೆಸಬೇಕಾಗಿದೆ ಅಗತ್ಯವಿದೆ ಎಂದು ಎನ್ ಸಿಪಿ ವಕ್ತಾರ ನವಾಬ್ ಮಲ್ಲಿಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


