ರಾಜಕೀಯ

ರಾಜಭವನಕ್ಕೆ ಕಾಂಗ್ರೆಸ್-ಜೆಡಿಎಸ್ ನಾಯಕರ ಭೇಟಿ: ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.

ರಾಜಭವನಕ್ಕೆ ಕಾಂಗ್ರೆಸ್-ಜೆಡಿಎಸ್ ನಾಯಕರ ಭೇಟಿ: ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆ
ರಾಜಭವನದಲ್ಲಿ ಕುಮಾರಸ್ವಾಮಿ-ಸಿದ್ದರಾಮಯ್ಯ
Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. 
ರಾಜಭವನಕ್ಕೆ ತೆರಳಿದ ಜೆಡಿಎಸ್ ನಾಯಕ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಾದ ಸಿಎಂ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್, ಹೆಚ್ ಎಂ ರೇವಣ್ಣ ಕಾಂಗ್ರೆಸ್-ಜೆಡಿಎಸ್ ಗೆ ಸರ್ಕಾರ ರಚನೆ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ರಾಜ್ಯಪಾಲರಲ್ಲಿ ಮನವಿ ಸಲ್ಲಿಸಿದ್ದಾರೆ. 
ಜೆಡಿಎಸ್ ನೊಂದಿಗೆ ಸರ್ಕಾರ ರಚನೆ ಮಾಡುವುದಕ್ಕೆ ಬೆಂಬಲ ನೀಡುವುದರ ಬಗ್ಗೆ ಕಾಂಗ್ರೆಸ್ ನಾಯಕರು ರಾಜ್ಯಪಲಾರಿಗೆ ಪತ್ರ ನೀಡಿದ್ದಾರೆ.  
"ಜೆಡಿಎಸ್ ಗೆ ಸರ್ಕಾರ ರಚನೆ ಮಾಡುವುದಕ್ಕೆ ಸಹಕಾರ ನೀಡಲು ಎಂದು ಕಾಂಗ್ರೆಸ್ ತೀರ್ಮಾನಿಸಿದೆ, ಈ ಹಿನ್ನೆಲೆಯಲ್ಲಿ ಬೆಂಬಲ ನೀಡಿರುವ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಲಾಗಿದೆ, ಉಳಿದ ತೀರ್ಮಾನಗಳನ್ನು ನಂತರ ಕೈಗೊಳ್ಳಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. 
"ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡುವುದಕ್ಕೆ ಕಾಂಗ್ರೆಸ್ ಬೆಂಬಲ ನೀಡಲು ಎಐಸಿಸಿ ತೀರ್ಮಾನ ಕೈಗೊಂಡಿದೆ, ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ನೀಡಲಾಗಿದೆ, ಉಳಿದ ವಿವರಗಳನ್ನು ನಂತರ ತಿಳಿಸಲಾಗುವುದು ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.