ಕರ್ನಾಟಕ ಜನತೆ ಉತ್ತಮ ಸರ್ಕಾರವನ್ನು ಬಯಸಿದೆ, ಹೀಗಾಗಿ ಬಿಜೆಪಿಯನ್ನೇ ಆಯ್ಕೆ ಮಾಡಿದೆ; ಜವಡೇಕರ್
ಕರ್ನಾಟಕ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದು, ಹೀಗಾಗಿಯೇ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಮಂಗಳವಾರ ಹೇಳಿದ್ದಾರೆ...

Published On :
ನವದೆಹಲಿ: ಕರ್ನಾಟಕ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದು, ಹೀಗಾಗಿಯೇ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಮಂಗಳವಾರ ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಹೊಸ್ತಿಲಿನಲ್ಲಿ ನಿಂತಿದೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕ ಜನತೆ ಉತ್ತಮ ಸರ್ಕಾರವನ್ನು ಬಯಸಿದೆ. ಹೀಗಾಗಿಯೇ ಅವರು ಬಿಜೆಪಿಯನ್ನು ಬಯಸಿದ್ದಾರೆ. ಪಕ್ಷಕ್ಕಿದು ದೊಡ್ಡ ಗೆಲುವಂದೇ ಹೇಳಬಹುದು ಎಂದು ಹೇಳಿದ್ದಾರೆ.
ಬಳಿಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಅವರು, ಒಂದಾದ ಬಳಿಕ ಒಂದರಂತೆ ಕಾಂಗ್ರೆಸ್ ಸರ್ಕಾರ ರಾಜ್ಯಗಳಲ್ಲಿ ಸೋಲು ಕಾಣುತ್ತಿದೆ. ಒಂದಾದ ಬಳಿಕ ಒಂದರಂತೆ ನಾವು ಗೆಲವು ಸಾಧಿಸುತ್ತಿದ್ದೇವೆಂದು ತಿಳಿಸಿದ್ದಾರೆ.
ಇದರಂತೆ ಛತ್ತೀಸ್ಗಢ ರಾಜ್ಯದ ಮುಖ್ಯಮಂತ್ರಿ ರಮಣ್ ಸಿಂಗ್ ಅವರೂ ಕೂಡ ಪ್ರತಿಕ್ರಿಯೆ ನೀಡಿ, ಬಿಜೆಪಿಗಿದು ಐತಿಹಾಸಿಕ ದಿನ. ನಮಗೆ ಮತ ಹಾಕಿದ ಕರ್ನಾಟಕ ಜನತೆಗೆ ಈ ಮೂಲಕ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿPrakash Javadekarಪ್ರಕಾಶ್ ಜವಡೇಕರ್ಕರ್ನಾಟಕ ವಿಧಾನಸಭಾ ಚುನಾವಣೆKarnataka assembly poll
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


