ರಾಜಕೀಯ

ಜಾತಿ ಸಮೀಕರಣದಲ್ಲಿ ಕಾಂಗ್ರೆಸ್ ಎಡವಿದ್ದು, ಸೋಲಿಗೆ ಕಾರಣ- ವೀರಪ್ಪ ಮೊಯ್ಲಿ

ಕರ್ನಾಟಕ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ನಿರಾಸೆ ವ್ಯಕ್ತಪಡಿಸಿದ್ದು, ಜಾತಿ ನಿರ್ವಹಣೆಯಲ್ಲಿ ತಪ್ಪು ಧೋರಣೆಯೇ ಕಾಂಗ್ರೆಸ್ ಸೋಲಿಗೆ ಮುಳುವಾಯಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಾತಿ ಸಮೀಕರಣದಲ್ಲಿ ಕಾಂಗ್ರೆಸ್ ಎಡವಿದ್ದು, ಸೋಲಿಗೆ ಕಾರಣ- ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Published On :

ನವದೆಹಲಿ : ಕರ್ನಾಟಕ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ನಿರಾಸೆ ವ್ಯಕ್ತಪಡಿಸಿದ್ದು, ಜಾತಿ ನಿರ್ವಹಣೆಯಲ್ಲಿ ತಪ್ಪು ಧೋರಣೆಯೇ ಕಾಂಗ್ರೆಸ್ ಸೋಲಿಗೆ ಮುಳುವಾಯಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆಗೂ ಮುಂಚೆ ಲಿಂಗಾಯಿತ ಸಮಸ್ಯೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಬಾರದಿತ್ತು. ಚುನಾವಣಾ ಕಾರ್ಯತಂತ್ರದಲ್ಲಿ ಜಾತಿ ಸಮೀಕರಣವನ್ನು ಕಾಂಗ್ರೆಸ್ ಸರಿಯಾಗಿ ನಿರ್ವಹಿಸಲಿಲ್ಲ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಕಾರಾತ್ಮಕ ಪ್ರಚಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಕರಾತ್ಮಕ ಪ್ರಚಾರ ನಡೆಸಿದ್ದರು. ಆದರೆ, ಫಲಿತಾಂಶ ನಿರಾಸೆಯನ್ನುಂಟುಮಾಡಿದೆ.  ಆದರೆ, ಅಭಿವೃದ್ದಿ  ಅಥವಾ ಸಾಮಾಜಿಕ ನ್ಯಾಯದ ನೆಲೆಯಲ್ಲಿ ಜಯಗಳಿಸಿರುವುದಾಗಿ ಅವರು ಹೇಳಿದ್ದಾರೆ.

 ಲಿಂಗಾಯಿತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕಾಂಗ್ರೆಸ್ ಪ್ರಸ್ತಾಪದ ಬಗ್ಗೆ ಪರಿಶೀಲನೆ ನಡೆಸಬೇಕಾದ ಅಗತ್ಯವಿದೆ. ಈ ವಿಚಾರವನ್ನು ಕಾಂಗ್ರೆಸ್ ಸರಿಯಾಗಿ ಕಾರ್ಯನಿರ್ವಹಿಸಲಿಲ್ಲ, ಇದರ ಬಗ್ಗೆ ಪುನರ್ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಲಿಂಗಾಯಿತ ಮತ್ತು ವೀರಶೈವ ಲಿಂಗಾಯಿತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಕೈಗೊಂಡು, ಕೇಂದ್ರಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು.


 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.