ದಕ್ಷಿಣ ಕನ್ನಡ: ಇವಿಎಂ ಯಂತ್ರದ ವಿರುದ್ಧ 7 ಕಾಂಗ್ರೆಸ್ ಅಭ್ಯರ್ಥಿಗಳ ದೂರು?
ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು...

Published On :
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ಅಭ್ಯರ್ಥಿಗಳು ನಿರ್ಧರಿಸಿದ್ದಾರೆ.
ಎಲೆಕ್ಟ್ರಾನಿಕ್ ಮತಯಂತ್ರಗಳ ಕಾರ್ಯ ನಿರ್ವಹಣೆಯ ಬಗ್ಗೆ ಸಂಶಯವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ಸಂಬಂಧ ಬುಧವಾರ ಜಿಲ್ಲಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ-ಜೆ ಆರ್ ಲೋಬೋ, ಮಂಗಳೂರು ಉತ್ತರ- ಮೊಯುದ್ದೀನ್ ಬಾವಾ, ಬಂಟ್ವಾಳ-ರಮಾನಾಥ ರೈ, ಪುತ್ತೂರು-ಶಕುಂತಲಾ ಶೆಟ್ಟಿ, ಮೂಡಬಿದ್ರಿ- ಅಭಯಚಂದ್ರ ಜೈನ್, ಬೆಳ್ತಂಗಡಿ- ವಸಂತ ಬಂಗೇರಾ ಹಾಗೂ ಸುಳ್ಯದ ಡಾ. ಬಿ. ರಘು ಆಕ್ಷೇಪಣೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೂರುcomplaintEVMಕಾಂಗ್ರೆಸ್ ಅಭ್ಯರ್ಥಿಇವಿಎಂKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆCongress Candidates
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


