ರಾಜ್ಯಪಾಲರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಪ್ರತಿಭಟನೆ ಮಾಡುತ್ತೇವೆ: ಸಿದ್ದರಾಮಯ್ಯ
ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಅವರ ವಿರುದ್ಧ...

Published On :
ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಅವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಶಾಸಕಾಂಗ ನಾಯಕನ ಆಯ್ಕೆ ಇನ್ನು ಅಂತಿಮವಾಗಿಲ್ಲ. ಸಂಜೆ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆಗ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆಗೆ ಸಂಖ್ಯಾ ಬಲವಿದೆ. ಈ ಆಧಾರದ ಮೇಲೆ ರಾಜ್ಯಪಾಲರು ಅವಕಾಶ ಕೊಡಬೇಕು. ಒಂದು ವೇಳೆ ಬಿಜೆಪಿಗೆ ಅವಕಾಶ ಕೊಟ್ಟರೆ ಸಂವಿಧಾನ ವಿರೋಧಿಯಾಗುತ್ತೆ ಎಂದರು.
ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತೆ. ಸಂವಿಧಾನ ನಿಯಮಾವಳಿಯಂತೆ ನಡೆದುಕೊಳ್ಳಬೇಕು. ಸಂವಿಧಾನ ಬಾಹಿರವಾಗಿ ನಡೆದುಕೊಂಡರೆ ರಾಜ್ಯಪಾಲರ ಹುದ್ದೆಗೆ ಗೌರವ ಇರಲ್ಲ. ಬಿಜೆಪಿ ಕುದರೆ ವ್ಯಾಪರಕ್ಕೆ ಮುಂದಾಗಿದೆ. ಅದ್ರೆ ನಮ್ಮ ಶಾಸಕರು ಒಂದಾಗಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಪ್ರತಿಭಟನೆJDSbjpಬಿಜೆಪಿSiddaramaiahಸಿದ್ದರಾಮಯ್ಯಜೆಡಿಎಸ್dharnaKarnataka Assembly Election
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


