ರಾಜಕೀಯ

ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರ ಪರೇಡ್, ಬಳಿಕ ರೆಸಾರ್ಟ್ ಗೆ

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ...

ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರ ಪರೇಡ್, ಬಳಿಕ ರೆಸಾರ್ಟ್ ಗೆ
ರಾಜ್ಯಪಾಲ ವಜುಭಾಯಿ ವಾಲಾ
Published On :
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ಸರ್ಕಾರ ರಚಿಸಲು ನಮ್ಮ ಬಳಿ ಅಗತ್ಯ ಸಂಖ್ಯಾಬಲ ಇದೆ. ಹೀಗಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅ
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಹ ರಾಜಭವನಕ್ಕೆ ತೆರಳುತ್ತಿದ್ದು, ಕೆಪಿಸಿಸಿ ಕಚೇರಿಯಿಂದ ಖಾಸಗಿ ಬಸ್‌ ಮೂಲಕ ಶಾಸಕರನ್ನು  ಮೊದಲು ರಾಜಭವನದಕ್ಕೆ ಕರೆದೊಯ್ಯಲಾಗುತ್ತಿದೆ. 
ಸಂಜೆ 5 ಗಂಟೆಗೆ ರಾಜ್ಯಪಾಲರು ಭೇಟಿಗೆ ಸಮಯ ನೀಡಲಾಗಿದ್ದು, ಕಾಂಗ್ರೆಸ್ - ಜೆಡಿಎಸ್ ನಾಯಕರು ವಜುಭಾಯಿ ವಾಲಾ ಅವರಿಗೆ ಶಾಸಕರ ಬೆಂಬಲ ಪತ್ರ ನೀಡಿ, ರಾಜ್ಯಪಾಲರ ಎದುರು ಪರೇಡ್‌ ನಡೆಸಲಿದ್ದಾರೆ. ಬಳಿಕ ರೆಸಾರ್ಟ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ ಅವರಿಗೆ ಶಾಸಕರನ್ನು ರೆಸಾರ್ಟ್‌ಗೆ ತಲುಪಿಸುವ ಜವಾಬ್ದಾರಿ ವಹಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.