ರಾಜ್ಯದ ಜನತೆ ಬಿಜೆಪಿ ಸರ್ಕಾರ ಬಯಸಿದ್ದಾರೆ, ಯಾರೇನೇ ಮಾಡಿದರೂ ಜನತೆ ನಮ್ಮೊಂದಿದ್ದಾರೆ: ಬಿಜೆಪಿ
ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ...

Published On :
ಬೆಂಗಳೂರು: ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ಯಾರು ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿ ಮಾಡಿದರೂ, ಕರ್ನಾಟಕದ ಜನತೆ ನಮ್ಮೊಂದಿಗಿದ್ದಾರೆ. ಸಭೆ ಬಳಿಕ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಹಿಂಬಾಗಿಲಿನಿಂದ ಕಾಂಗ್ರೆಸ್ ಮಾಡಿದ ಪ್ರವೇಶ ಸರಿಯಲ್ಲ ಎಂದು ಹೇಳಿದ್ದಾರೆ.
ಇದರಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕರನ್ನು ಆಯ್ಕೆ ಮಾಡಲಾಗುತ್ತಿದೆ. ಇದಾದ ಬಳಿಕ ಕೂಡಲೇ ರಾಜಭವನಕ್ಕೆ ತೆರಳಲಾಗುತ್ತದೆ. ರಾಜ್ಯಪಾಲರ ಭೇಟಿ ವೇಳೆ ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಮೊದಲು ಅವಕಾಶ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ಬಹುಮತ ಸಾಬೀತುಪಡಿಸಲು ನಾಳೆಯವರೆಗೂ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ಹೇಳಿದ್ದಾರೆ.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ನಮ್ಮದು ಏಕೈಕ ಅತೀದೊಡ್ಡ ಪಕ್ಷವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ 6 ತಿಂಗಳ ಹಿಂದೆ ಹೇಗೆ ಹೊಡೆದಾಡುತ್ತಿದೆ ಎಂಬುದನ್ನು ನೀವು ನೋಡಿರಬಹುದು. ಇದೀಗ ಇಬ್ಬರು ಒಂದಾಗಿ, ಸರ್ಕಾರ ರಚಿಸಲು ಹೊರಟಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


