’ಕುದುರೆ ವ್ಯಾಪಾರ’ ಕುರಿತ ಸಿದ್ದರಾಮಯ್ಯ ಆರೋಪ ಆಧಾರರಹಿತ: ರವಿಶಂಕರ್ ಪ್ರಸಾದ್
ಕರ್ನಾಟಕದಲ್ಲಿ ಕುದುರೆ ವ್ಯಾಪಾರ ನಡೆಸಲು ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ಪ್ರಚೋದನೆ ನಿಡುತ್ತಿದ್ದಾರೆ ಎನ್ನುವ ಕರ್ನಾಟಕ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ....

Published On :
ನವದೆಹಲಿ: ಕರ್ನಾಟಕದಲ್ಲಿ ಕುದುರೆ ವ್ಯಾಪಾರ ನಡೆಸಲು ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ಪ್ರಚೋದನೆ ನಿಡುತ್ತಿದ್ದಾರೆ ಎನ್ನುವ ಕರ್ನಾಟಕ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಶುದ್ದ ಸುಳ್ಳು, ಇದೊಂದು ಆಧಾರರಹಿತ, ಬೇಜವಾಬ್ದಾರಿ ಹೇಳಿಕೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಎಎನ್ ಐ ಜತೆ ಮಾತನಾಡಿದ ಪ್ರಸಾದ್ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ಕುದುರೆ ವ್ಯಾಪಾರಕ್ಕೆ ಪ್ರೋತ್ಸಾಹಿಸಿದ್ದಾರೆ ಎನ್ನುವ ಸಿದ್ದರಾಮಯ್ಯ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಮಂಗಳವಾರ ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿಬಿಜೆಪಿ 104 ಸ್ಥಾನಗಳೊಡನೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಕಾಂಗ್ರೆಸ್ ಮತ್ತು ಜೆಡಿ (ಎಸ್) ಕ್ರಮವಾಗಿ 78 ಹಾಗೂ 37 ಸ್ಥಾನಗಳನ್ನು ಗೆದ್ದುಕೊಂಡಿವೆ.
ಫಲಿತಾಂಶ ಬಂದ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡುತದೆ ಆ ಮೂಲಕ ಸರ್ಕಾರ ರಚನೆಗೆ ಬೇಕಾದ ಬಹುಮತ ಪಡೆಯಲಿದ್ದೇವೆ ಎಂದು ಪಕ್ಷದ ವಕ್ತಾರರು ಘೋಷಿಸಿದ್ದಾರೆ.
ರಾಜ್ಯದ ವಿಧಾನಸಭೆ ಚುನಾವಣೆ ಫಲಿತಾಂಶಗಳು ಅತಂತ್ರವಾಗಿದ್ದು ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರ ರಚನೆ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿRavi Shankar Prasadರವಿಶಂಕರ್ ಪ್ರಸಾದ್Narendra ModJD (S)ಜೆಡಿ(ಎಸ್)
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


