ರಾಜಕೀಯ

ಸಂಶಯವೇ ಇಲ್ಲ, ಸರ್ಕಾರ ರಚಿಸುವುದು ನಾವೇ: ಕೆ.ಎಸ್. ಈಶ್ವರಪ್ಪ

ಯಾವುದೇ ಸಂಶಯಗಳಿಲ್ಲ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ನಾವೇ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ...

ಸಂಶಯವೇ ಇಲ್ಲ, ಸರ್ಕಾರ ರಚಿಸುವುದು ನಾವೇ: ಕೆ.ಎಸ್. ಈಶ್ವರಪ್ಪ
ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ
Published On :
ಬೆಂಗಳೂರು: ಯಾವುದೇ ಸಂಶಯಗಳಿಲ್ಲ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ನಾವೇ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ. 
ಇಡೀ ದೇಶದಾದ್ಯಂತ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ನಿನ್ನೆಯಷ್ಟೇ ಹೊರ ಬಿದ್ದಿದ್ದು, ರಾಜ್ಯದಲ್ಲಿ ಅತಂತ್ರ ಸ್ಥಿತಿ ಎದುರಾಗಿದೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಅವರು, ಸರ್ಕಾರ ರಚಿಸುವುದು ನಾವೇ. ಇದರಲ್ಲಿ ಯಾವುದೇ ರೀತಿಯ ಸಂಶಯಗಳಿಲ್ಲ. ಕಾದು, ನೋಡಿ ಶೇ.100ರಷ್ಟು ಸರ್ಕಾರ ರಚಿಸುವುದು ನಾವೇ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶ ಬಂದು ಇನ್ನೂ ಒಂದು ದಿನ ಕಳೆದಿದೆ ಅಷ್ಟೇ. ಇನ್ನೊಂದು ದಿನದಲ್ಲಿ ಕರ್ನಾಟಕದಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.