ಬಹುಮತ ಸಾಬೀತುಪಡಿಸಲು 15 ದಿನ ಅವಕಾಶ, ಬಿಎಸ್ ವೈ ಮುಂದಿರುವ ಆಯ್ಕೆಗಳು...
ಅತಂತ್ರ ವಿಧಾನಸಭೆ ನಿರ್ಮಾಣವಾಗಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವ ಮಧ್ಯೆಯೇ ಬಿಜೆಪಿ ಶಾಸಕಾಂಗ ಪಕ್ಷದ....

Published On :
ಬೆಂಗಳೂರು: ಅತಂತ್ರ ವಿಧಾನಸಭೆ ನಿರ್ಮಾಣವಾಗಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವ ಮಧ್ಯೆಯೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಂದಿನ ಐದು ವರ್ಷಗಳ ಕಾಲ ಅಧಿಕಾರದಲ್ಲಿರುವುದಾಗಿ ಹೇಳಿದ್ದಾರೆ.
ಸಂಖ್ಯಾ ಬಲದ ಕೊರತೆ ಎದುರಿಸುತ್ತಿರುವ ಯಡಿಯೂರಪ್ಪ ಅವರು ಬಹುಮತ ಹೇಗೆ ಸಾಬೀತುಪಡಿಸುತ್ತಾರೆ ಎಂಬುದನ್ನು ಮಾತ್ರ ಹೇಳುತ್ತಿಲ್ಲ.
ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನಗಳ ಕಾಲಾವಕಾಶ ನೀಡಿದ್ದು, ಸಂಖ್ಯಾ ಬಲ ಹೊಂದಿಸಿಕೊಳ್ಳಲು ಬಿಎಸ್ ವೈ ರಣತಂತ್ರ ರೂಪಿಸುತ್ತಿದ್ದಾರೆ.
ವಿಶ್ವಾಸಮತ ಗೆಲ್ಲಲು ಯಡಿಯೂರಪ್ಪ ಮುಂದಿರುವ ಆಯ್ಕೆಗಳು...
1. ಸರಳ ಬಹುಮತಕ್ಕೆ ಎಂಟು ಶಾಸಕರ ಅಗತ್ಯವಿರುವುದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು.
2. ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಸದನದಲ್ಲಿಯೇ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಿಸುವುದು.
3. ಎದುರಾಳಿ ಪಕ್ಷದ 15 ಶಾಸಕರು ಸದನದಿಂದ ಹೊರಗೆ ಉಳಿಯುವಂತೆ ನೋಡಿಕೊಳ್ಳುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


