ರಾಜಕೀಯ

ಜೂ.11ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ, 16ಕ್ಕೆ ಫಲಿತಾಂಶ

ಬಿಜೆಪಿ ಅಭ್ಯರ್ಥಿ ಬಿಎನ್ ವಿಜಯಕುಮಾರ್ ನಿಧನಿಂದ ಮುಂದೂಡಿಕೆಯಾಗಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ...

ಜೂ.11ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ, 16ಕ್ಕೆ ಫಲಿತಾಂಶ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿಎನ್ ವಿಜಯಕುಮಾರ್ ನಿಧನಿಂದ ಮುಂದೂಡಿಕೆಯಾಗಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್‌ 11 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜೂನ್‌ 11 ರಂದು ಮತದಾನ ನಡೆಯಲಿದ್ದು, ಜೂನ್‌ 16ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಮೇ 18 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮೇ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 
ಕಾಂಗ್ರೆಸ್‌ ನಿಂದ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಕಣದಲ್ಲಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ಕೂಡ ಘೋಷಣೆಯಾಗಿಲ್ಲ. 
ಇನ್ನು ವೋಟರ್ ಐಡಿ ಕಾರ್ಡ್ ಪತ್ತೆಯಾದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಮೇ 28ರಂದು ಚುನಾವಣೆ ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.