ರಾಜಕೀಯ

ಆಪರೇಷನ್ ಕಮಲಕ್ಕೆ ಚಾಲನೆ?: ನಿರೀಕ್ಷೆಗೂ ಮೀರಿದ ಬಹುಮತ ಪಡೆಯುತ್ತೇವೆ ಎಂದ ಶಾಸಕ ಶ್ರೀರಾಮುಲು

ಬಹಮತ ಇಲ್ಲದ ಹೊರತಾಗಿಯೂ ಬಿಜೆಪಿಯ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಎಲ್ಲ ಚಿತ್ತ ವಿಶ್ವಾಸ ಮತ ಯಾಚನೆಯತ್ತ ಹೊರಳಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ.

ಆಪರೇಷನ್ ಕಮಲಕ್ಕೆ ಚಾಲನೆ?: ನಿರೀಕ್ಷೆಗೂ ಮೀರಿದ ಬಹುಮತ ಪಡೆಯುತ್ತೇವೆ ಎಂದ ಶಾಸಕ ಶ್ರೀರಾಮುಲು
ಶಾಸಕ ಬಿ ಶ್ರೀರಾಮುಲು
Published On :
ಬೆಂಗಳೂರು: ಬಹಮತ ಇಲ್ಲದ ಹೊರತಾಗಿಯೂ ಬಿಜೆಪಿಯ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಎಲ್ಲ ಚಿತ್ತ ವಿಶ್ವಾಸ ಮತ ಯಾಚನೆಯತ್ತ ಹೊರಳಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ.
ಅತ್ತ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸುತ್ತಿರುವಂತೆಯೇ ಇತ್ತ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು, ಪಕ್ಷೇತರ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅಂತೆಯೇ ಇನ್ನೂ ಹತ್ತಾರು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು ವಿಶ್ವಾಸ ಮತ ಯಾಚನೆ ವೇಳೆ ಬಿಜೆಪಿ ಪಕ್ಷ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಪರೇಷನ್ ಕಮಲ ಜಾರಿ, ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಸೇರಿ ಇಬ್ಬರು ಶಾಸಕರು ನಾಪತ್ತೆ
ಇನ್ನು ಪ್ರಸ್ತುತ ಅಧಿಕಾರಕ್ಕೇರಿರುವ ಬಿಜೆಪಿ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ ನಾಯಕರು ಈಗಾಗಲೇ ಆಪರೇಷನ್ ಕಮಲ ಜಾರಿ ಮಾಡಿದ್ದು, ಇದರ ಪರಿಣಾಮವೇನೋ ಎಂಬಂತೆ ಕಾಂಗ್ರೆಸ್ ನ ಇಬ್ಬರು ಶಾಸರು ನಾಪತ್ತೆಯಾಗಿದ್ದಾರೆ. ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ಪ್ರತಾಪ್ ಗೌಡ ನಾಪತ್ತೆಯಾಗಿದ್ದು, ಈ ಇಬ್ಬರು ಶಾಸಕರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ, ಇದೇ ವಿಚಾರವಾಗಿ ಮಾತನಾಡಿದ್ದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಆನಂದ್ ಸಿಂಗ್ ತಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಅವರು ಪ್ರಧಾನಿ ಮೋದಿ ಹಿಡಿತದಲ್ಲಿ ಇರಬಹುದು ಎಂದು  ಹೇಳಿದ್ದಾರೆ. 
ಇದಕ್ಕೆ ಇಂಬು ನೀಡುವಂತೆ ಮಾತನಾಡಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಆನಂದ್ ಸಿಂಗ್ ಅವರಿಗೆ ಪ್ರಧಾನಿ ಮೋದಿ ಬೆದರಿಕೆ ಹಾಕಿದ್ದು, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.