ರಾಜಕೀಯ

ಆಪರೇಷನ್ ಕಮಲ ಭೀತಿ; ಬೆಂಗಳೂರು ರೆಸಾರ್ಟ್'ನಿಂದ ಹೈದರಾಬಾದ್'ಗೆ ಶಾಸಕರು ಶಿಫ್ಟ್

ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಗಂಟುಮೂಟೆ ಕಟ್ಟಿದ್ದು, ಹೈದರಾಬಾದ್'ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಆಪರೇಷನ್ ಕಮಲ ಭೀತಿ; ಬೆಂಗಳೂರು ರೆಸಾರ್ಟ್'ನಿಂದ ಹೈದರಾಬಾದ್'ಗೆ ಶಾಸಕರು ಶಿಫ್ಟ್
ಆಪರೇಷನ್ ಕಮಲ ಭೀತಿ; ಬೆಂಗಳೂರು ರೆಸಾರ್ಟ್'ನಿಂದ ಹೈದರಾಬಾದ್'ಗೆ ಶಾಸಕರು ಶಿಫ್ಟ್
Published On :
ಬೆಂಗಳೂರು; ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಗಂಟುಮೂಟೆ ಕಟ್ಟಿದ್ದು, ಹೈದರಾಬಾದ್'ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರು ಹಾಗೂ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಉಳಿದುಕೊಂಡಿದ್ದ ಜೆಡಿಎಸ್ ಶಾಸಕರು ಕೊಚ್ಚಿ ಹಾಗೂ ಹೈದರಾಬಾದ್ ರೆಸಾರ್ಟ್ ಸೇರಿ ವಿವಿಧ ಹೋಟೆಲ್'ಗಳಲ್ಲಿ ವಾಸ್ತವ್ಯ ಹೂಡಲು ಮುಂದಾಗಿದ್ದಾರೆ. 
ಕಾಂಗ್ರೆಸ್ ಶಾಸಕರು ಗುರುವಾರ ತಡರಾತ್ರಿ 12 ಹಾಗೂ 3 ಗಂಟೆಗೆ ಬೆಂಗಳೂರಿನಿಂದ 2 ವಿಮಾನಗಳಲ್ಲಿ ಕೊಚ್ಚಿಗೆ ತೆರಳಿದ್ದ, ಜೆಡಿಎಸ್ ಶಾಸಕರು ಶುಕ್ರವಾರ ಪ್ರಯಾಣ ಬೆಳೆಸಲಿದ್ದಾರೆ, ಕಾಂಗ್ರೆಸ್ ಶಾಸಕರನ್ನು ಕೊಟ್ಟಿಗೆ ಸ್ಥಳಾಂತರಿಸಲು ವಿಶೇಷ ವಿಮಾನ ವ್ಯವಸ್ಥೆಯಾಗದ್ದರಿಂದಾಗಿ ನಾಗರೀಕ ವಿಮಾನದಲ್ಲಿಯೇ ತೆರಳಿದ್ದಾರೆಂದು ವರದಿಗಳು ತಿಳಿಸಿವೆ. 
ವಿಶೇಷ ವಿಮಾನಕ್ಕೆ ಕೇಂದ್ರ ಸರ್ಕಾರದ ಅಧೀನದ ನಾಗರೀಕ ವಿಮಾನಯಾನ ಸಚಿವಾಲಯ ನಿರಾಕರಿಸಿದೆ ಎಂದು ಹೇಳಲಾಗುತ್ತಿದ್ದು, ಇದು ಕಾಂಗ್ರೆಸ್ಸಿಗರ ಕಣ್ಣು ಕೆಂಪಗಾಗುವಂತೆ ಮಾಡಿದೆ.
ಈ ನಡುವೆ ಈಗಲ್ ಟನ್ ರೆಸಾರ್ಟ್ ಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನೂ ಗುರುವಾರ ಮಧ್ಯಾಹ್ನ 4.30ರ ವೇಳೆಗೆ ಹಿಂದಕ್ಕೆ ಪಡೆಯಲಾಗಿದೆ. 

ರೆಸಾರ್ಟ್ ಬಳಿ ಒಂಡು ಡಿಎಆರ್ ತುಕಡಿ ಹಾಗೂ ಇಪ್ಪತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಮುಖ್ಯಮಂತ್ರಿ ಕಾರ್ಯಾಲಯದ ಸೂಚನೆ ಮೇರೆಗೆ ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.