ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ನೇಮಕ
ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಶುಕ್ರವಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ....

Published On :
ಬೆಂಗಳೂರು: ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಶುಕ್ರವಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೆಜಿ ಬೋಪಯ್ಯ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೋಪಯ್ಯ ಅವರ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಹಾಗೂ ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ.
ವಿಶ್ವಾಸ ಮತಯಾಚನೆಯನ್ನು ರಹಸ್ಯ ಮತದಾನದ ಮೂಲಕ ಮಾಡಬೇಕೆಂದು ಬಿಜೆಪಿ ಬಯಸಿತ್ತು. ಆದರೆ, ಸುಪ್ರೀಂ ಕೋರ್ಟ್ ತನ್ನ ಲಿಖಿತ ಆದೇಶದಲ್ಲಿ, ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ ರಹಸ್ಯ ಮತದಾನ ನಡೆಸಕೂಡದು ಎಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


