ರಾಜಕೀಯ

ಎಚ್​.ಡಿ. ದೇವೇಗೌಡರಿಗೆ ಜನ್ಮ ದಿನದ ಶುಭ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ 86ನೇ ಜನ್ಮ ದಿನಾಚರಣೆ ನಿಮಿತ್ತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಶುಭ ಕೋರಿದ್ದಾರೆ.

ಎಚ್​.ಡಿ. ದೇವೇಗೌಡರಿಗೆ ಜನ್ಮ ದಿನದ ಶುಭ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ
ಸಂಗ್ರಹ ಚಿತ್ರ
Published On :
ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ 86ನೇ ಜನ್ಮ ದಿನಾಚರಣೆ ನಿಮಿತ್ತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಶುಭ ಕೋರಿದ್ದಾರೆ.
ಇಂದು ದೇವೇಗೌಡ ಅವರ 86ನೇ ಜನ್ಮ ದಿನಾಚರಣೆಯಾಗಿದ್ದು, ಈ ಬಗ್ಗೆ ಟ್ವಿಟರ್ ನಲ್ಲಿ ಶುಭ ಕೋರಿರುವ ಸಿದ್ದರಾಮಯ್ಯ ಅವರು, 'ನಾಡಿನ ನೆಲ,ಜಲ,ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ ಎಂದು ಶ್ಲಾಘಿಸಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್​ ಮಾಡಿ ಶುಭ ಕೋರಿರುವ ಸಿದ್ದರಾಮಯ್ಯ, 'ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ವಿರೋಧಪಕ್ಷದ ನಾಯಕರಾಗಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕೀರ್ತಿ ನಿಮ್ಮದು. ನಾಡಿನ ನೆಲ,ಜಲ,ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ' ಎಂದು ಹಾರೈಸಿದ್ದಾರೆ.
ಈ ಹಿಂದೆ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಮತ್ತು ಎಚ್ ಡಿ ದೇವೇಗೌಡ ಅವರ ವಿರುದ್ಧ ವಾಗ್ದಾಳಿ ಮೂಲಕ ಸುದ್ದಿಗೆ ಗ್ರಾಸವಾಗಿದ್ದರು. ಚುನಾವಣಾ ಫಲಿತಾಂಶದ ಬಳಿಕ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿವೆ.
ಇನ್ನು ಜನ್ಮ ದಿನಾಚರಣೆ ಮತ್ತು ಕರ್ನಾಟಕರ ರಾಜಕೀಯ ಪರಿಸ್ಥಿತಿ ಹಿನ್ನಲೆಯಲ್ಲಿ ದೇವೇಗೌಡ ಅವರು ತಿರುಪತಿ- ತಿರುಮಲ ದೇಗುಲಕ್ಕೆ ಭೇಟಿ ನೀಡಿದ್ದು, ಪತ್ನಿ ಸಮೇತರಾಗಿ ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.