ಸೇವೆ ಮಾಡಲು ಅಧಿಕಾರ ಬೇಕಿಲ್ಲ, ಶಾಸಕ ಸ್ಥಾನವೇ ಸಾಕು: ಹೆಚ್ ವಿಶ್ವನಾಥ್ ಪುತ್ರ ತೀವ್ರ ಗರಂ
ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ ಆದೇಶ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪರ ತೀವ್ರವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಜೆಡಿಎಸ್ ಮುಖಂಡ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಫೇಸ್ ಬುಕ್ ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On :
ಮೈಸೂರು: ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ ಆದೇಶ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪರ ತೀವ್ರವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಜೆಡಿಎಸ್ ಮುಖಂಡ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಫೇಸ್ ಬುಕ್ ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕರ ಕುದುರೆ ವ್ಯಾಪರ ಸಂಬಂಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹುಣಸೂರು ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್, ಇದೆಲ್ಲವೂ ನಮ್ಮ ಬಳಿ ನಡೆಯುವುದಿಲ್ಲ ಎಂದು ಫೇಸ್ಬುಕ್ನಲ್ಲಿ ಸ್ಟೇಟಸ್ ಪ್ರಕಟಿಸಿದ್ದಾರೆ.
ಕುದುರೆ ವ್ಯಾಪಾರವೆಲ್ಲ ಎಚ್.ವಿಶ್ವನಾಥ್ ಅವರ ಬಳಿ ನಡೆಯುವುದಿಲ್ಲ. ನಾವು ಪಕ್ಷ ನಿಷ್ಠರು. ಅವಕಾಶವಾದಿಗಳಲ್ಲ. ನಮ್ಮ ತಂದೆಯನ್ನು ಸೆಳೆಯಲು ನನ್ನ ಮೂಲಕ ಪ್ರಯತ್ನ ನಡೆಸುತ್ತಿರುವವರು ಇದನ್ನೆಲ್ಲ ನಿಲ್ಲಿಸಿ. ಅಧಿಕಾರವಿಲ್ಲದಿದ್ದರೂ ಸರಿಯೇ, ಮತ ನೀಡಿದ ಜನರ ಪರ ಶಾಸಕನಾಗಿ ನಿಲ್ಲುವುದೇ ಸರಿ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಪೂರ್ವಜ್ ವಿಶ್ವನಾಥ್ ಅವರ ಈ ಸ್ಟೇಟಸ್ ಇದೀಗ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
FacebookಮೈಸೂರುMysuruಕುದುರೆ ವ್ಯಾಪಾರಎಚ್ ವಿಶ್ವನಾಥ್H.VishwanathKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆHorse TradePoorvaj Vishwanathಪೂರ್ವಜ್ ವಿಶ್ವನಾಥ್ಫೇ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


