ರಾಜಕೀಯ

ಶೇ.100ರಷ್ಟು ಬಹುಮತ ಸಾಬೀತು ಪಡಿಸುತ್ತೇನೆ: ಸಿಎಂ ಬಿ.ಎಸ್.ಯಡಿಯೂರಪ್ಪ

ವಿಶ್ವಾಸಮತಯಾಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶೇ.100ರಷ್ಟು ಬಹುಮತ ಸಾಬೀತು ಪಡಿಸುತ್ತೇನೆಂದು ಶನಿವಾರ ಹೇಳಿದ್ದಾರೆ...

ಶೇ.100ರಷ್ಟು ಬಹುಮತ ಸಾಬೀತು ಪಡಿಸುತ್ತೇನೆ: ಸಿಎಂ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Published On :
ಬೆಂಗಳೂರು: ವಿಶ್ವಾಸಮತಯಾಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶೇ.100ರಷ್ಟು ಬಹುಮತ ಸಾಬೀತು ಪಡಿಸುತ್ತೇನೆಂದು ಶನಿವಾರ ಹೇಳಿದ್ದಾರೆ. 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶೇ.100ರಷ್ಟು ಬಹುಮತ ಸಾಬೀತು ಪಡಿಸುತ್ತೇನೆ. ರಾಜ್ಯ ಜನತೆಗೆ ನೀಡಲಾಗಿದ್ದ ಭರವಸೆಗಳ ಕುರಿತು ನಾಳೆಯೇ ತೀರ್ಮಾನ ಕೈಗೊಳ್ಳುತ್ತೇನೆಂದು ತಿಳಿಸಿದ್ದಾರೆ. 
ವಿಧಾನಸಭೆಯಲ್ಲಿ ನೂರಕ್ಕೆ ನೂರರಷ್ಟು ನಾನು ವಿಶ್ವಾಸಮತ ಗೆಲ್ಲುತ್ತೇನೆ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ಯಾರೂ ನಿರೀಕ್ಷಿಸದ ಮಟ್ಟದಲ್ಲಿ ಫಲಿತಾಂಶ ಸಿಗಲಿದೆ ಸಂಜೆ 5 ಗಂಟೆಗೆ ರಾಜ್ಯ ವಾಪ್ತಿ ವಿಜಯೋತ್ಸವ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ಧಕೆ ಮಾಡಿಕೊಳ್ಳಿ. ನಾವು ಚುನಾವಣೆ ವೇಳೆ ಮತದಾರರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆಯಲ್ಲಿ ಪರಸ್ಪರ ನಿಂದಿಸಿಕೊಂಡ ವಿರೋಧ ಪಕ್ಷಗಳು ಈಗ ಅಧಿಕಾರಕ್ಕಾಗಿ ಒಗ್ಗೂಡಿವೆ ಗೆಲುವು ನಮ್ಮದೇ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.