ಸಂಸದ ಸ್ಥಾನಕ್ಕೆ ಶ್ರೀರಾಮುಲು, ಬಿಎಸ್ ವೈ ರಾಜಿನಾಮೆ
ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು ಶನಿವಾರ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು ಶನಿವಾರ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಮುಕ್ತಾಯವಾದ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿಎಸ್ ಯಡಿಯೂರಪ್ಪ ಹಾಗೂ ಮೊಳಕಾಲ್ಮೂರು ಕ್ಷೇತ್ರದಿಂದ ಬಿ ಶ್ರೀರಾಮುಲು ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಇಂದು ಆರಂಭವಾದ ವಿಶೇಷ ಅಧಿವೇಶನದಲ್ಲಿ ಉಭಯ ನಾಯಕರೂ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿನ್ನಲೆಯಲ್ಲಿ ತಮ್ಮ ಸಂಸದ ಸ್ಥಾನಕ್ಕೆ ಬಿ ಶ್ರೀರಾಮುಲು, ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ.
ಈಗಾಗಲೇ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಉಭಯ ನಾಯಕರು ರವಾನೆ ಮಾಡಿದ್ದು, ಸ್ಪೀಕರ್ ಅವರೂ ಕೂಡ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurubjpಬಿಜೆಪಿResignationರಾಜಿನಾಮೆBS YeddyurappaಲೋಕಸಭೆB Sriramuluಬಿ ಶ್ರೀರಾಮುಲುloksabhaಬಿಎಸ್ ಯಡಿಯೂರಪ್ಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


