ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿಗೆ ಆಮಿಷವೊಡ್ಡಿದ ಆರೋಪ
ವಿಶ್ವಾಸಮತ ಯಾಚನೆ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬೆಂಬಲಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿಗೆ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಬಿಎಸ್ ವೈ ಪುತ್ರ ವಿಜಯೇಂದ್ರ...

Published On :
ಬೆಂಗಳೂರು: ವಿಶ್ವಾಸಮತ ಯಾಚನೆ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬೆಂಬಲಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿಗೆ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಬಿಎಸ್ ವೈ ಪುತ್ರ ವಿಜಯೇಂದ್ರ ವಿರುದ್ಧ ಕೇಳಿ ಬಂದಿದೆ.
ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ ಅವರ ಪತ್ನಿ ಅವರಿಗೆ ವಿಜಯೇಂದ್ರ ಹಾಗೂ ಯಡಿಯೂರಪ್ಪ ಆಪ್ತ ಬಿಜಿ ಪುಟ್ಟಸ್ವಾಮಿ ಅವರು ದೂರವಾಣಿ ಕರೆ ಮಾಡಿ ಸಚಿವ ಸ್ಥಾನ ಹಾಗೂ ಐದು ಕೋಟಿ, ಸಚಿವ ಸ್ಥಾನ ಬೇಡ ಎಂದರೆ 15 ಕೋಟಿ ರುಪಾಯಿ, ಹೆಬ್ಬಾರ ಪುತ್ರನ ವಿರುದ್ಧ ಇರುವ ಗಣಿಗಾರಿಕೆ ಪ್ರಕರಣದಿಂದ ಪಾರು ಮಾಡುವ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ.
ಶಾಸಕರ ಪತ್ನಿ ಜತೆ ವಿಜಯೇಂದ್ರ ಹಾಗೂ ಪುಟ್ಟಸ್ವಾಮಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ಉಗ್ರಪ್ಪ ರಿಲೀಸ್ ಮಾಡಿದ್ದಾರೆ. ಬಿಜೆಪಿ ಶಾಸಕರ ಕುದುರೆ ವ್ಯಾಪಾರ ಮಾಡುತ್ತಿರುವುದು ಈ ಆಡಿಯೋದಿಂದ ಬಹಿರಂಗವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿYeddyurappaಬಿಎಸ್ ಯಡಿಯೂರಪ್ಪHorse tradingಕುದುರೆ ವ್ಯಾಪಾರKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆVijayendraವಿಜಯೇಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


