ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ, ಬುಧವಾರ ಪ್ರಮಾಣ ವಚನ
ಬೌಮತ ಸಾಬೀತಿಗೆ ವಿಫಲವಾದ ಬಿಜೆಪಿ ಸರ್ಕಾರ ಉರುಳಿದ್ದು ಇದೀಗ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ.

Published On :
ಬೆಂಗಳೂರು: ಬೌಮತ ಸಾಬೀತಿಗೆ ವಿಫಲವಾದ ಬಿಜೆಪಿ ಸರ್ಕಾರ ಉರುಳಿದ್ದು ಇದೀಗ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬುಧವಾರ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸೋಮವಾರ ಭಾರತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಇರುವ ಕಾರಣ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಂದು ಪ್ರಮಾಣವಚನ ಕಾರ್ಯಕ್ರಮ ನಡೆಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿದೆ.
ಇನ್ನು ಮಂಗಳವಾರ ಅಷ್ಟೊಂದು ಒಳ್ಳೆಯ ದಿನವಲ್ಲದ ಕಾರಣ ಬುಧವಾರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜೀವ್ ಗಾಂಧಿHD KumaraswamyWednesdayಎಚ್ ಡಿ ಕುಮಾರಸ್ವಾಮಿಪ್ರಮಾಣವಚನoath-taking ceremonyKarnataka Assembly Election
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


