ನಾಡಿದ್ದು 22 ರಂದು ಬಿಜೆಪಿಯ ಸೋತ ಶಾಸಕರ ಸಭೆ: ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣೆಯಲ್ಲಿ ಸೋತ ಪಕ್ಷದ ಶಾಸಕರ ಜೊತೆ ಪರಾಮರ್ಶೆಗೆ ಮುಂದಾಗಿದ್ದಾರೆ.
ಈ ಸಂಬಂಧ ನಾಡಿದ್ದು ಮಂಗಳವಾರ ಸಂಜೆ 5 ಗಂಟೆಗೆ ಅವರು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಭೆ ಕರೆದಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಚುನಾವಣೆಯಲ್ಲಿ ಹಲವು ಬಿಜೆಪಿ ಶಾಸಕರು ಕಡಿಮೆ ಅಂತರದಲ್ಲಿ ಸೋಲನುಭವಿಸಿದ್ದಾರೆ. ಅವರ ಸೋಲಿಗೆ ಕಾರಣವೇನು, ಯಾವ ಅಂಶಗಳು ಹಿನ್ನಡೆಯಾಯಿತು, ಸರ್ಕಾರ ರಚನೆ ಯತ್ನ ವಿಫಲವೇಕೆ ಆಯಿತು ಎಂಬಿತ್ಯಾದಿ ವಿಷಯಗಳ ಕುರಿತು ಚುನಾವಣೆಯಲ್ಲಿ ಸೋಲನ್ನು ಕಂಡ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದೇನೆ ಎಂದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿವೆ. ವಿಶ್ವಾಸಮತ ಯಾಚಿಸಿ ಸರ್ಕಾರ ಅಸ್ತಿತ್ವಕ್ಕೆ ಬಂದು ಮಂತ್ರಿಮಂಡಲ ರಚನೆಯಾದ ನಂತರ ಬಿಜೆಪಿಯ ಮುಂದಿನ ನಡೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


